ಉಡುಪಿ : ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂದಿಸಿದಂತೆ ಉಡುಪಿ ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಉಡುಪಿ ಜಿಲ್ಲಾಡಳಿತ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿಯವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಅವರು ಮತದಾನದ ಕುರಿತಂತೆ ಜಾಗೃತಿ ಮೂಡಿಸಲು ಒಂದು ಒಳ್ಳೆಯ ಕಾರ್ಯಕ್ರಮ ಅಂದಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಉಡುಪಿ ಜಿಲ್ಲಾಡಳಿತ ಮತದಾನ ಜಾಗೃತಿಗಾಗಿ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅದರಲ್ಲಿ ಇದೇ ಮೊದಲ ಬಾರಿಗ ಅತ್ಯಂತ ವಿಶಿಷ್ಟ ರೀತಿಯಲ್ಲಿ ಹೊಳೆಯಲ್ಲಿ ಕಯಾಕಿಂಗ್ ಮೂಲಕ ತೆರಳಿ ಮಾಂಗ್ರೋವ್ ಕಾಡುಗಳ ಮಧ್ಯೆ ಕಯಾಕ್ ಗಳಲ್ಲಿ ವಿನೂತನ ರೀತಿಯಲ್ಲಿ ಮತದಾನ ಮಹತ್ವ ಕುರಿತು ಜಾಗೃತಿ ಮೂಡಿಸಲಾಗಿದೆ.
ಜಿಲ್ಲಾಡಳಿತ ಉಡುಪಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಸಾಲಿಗ್ರಾಮದ ಸೀತಾ ನದಿಯ ಹಿನ್ನೀರಿನಲ್ಲಿ ನಡುವಿನ ದಟ್ಟ ಕಾಂಡ್ಲಾವನದ ನಡುವೆ ಕಯಾಕಿಂಗ್ ಮಾಡಲು ಬಳಸುವ ದೋಣಿಗಳ ಮೂಲಕ ಮತದಾನ ಜಾಗೃತಿಯ ಸಂದೇಶವನ್ನು ಸಾರಲಾಯಿತು.
ಸದ್ಯ ಕಾರ್ಯಕ್ರಮದ ವಿಡಿಯೋವನ್ನು ಚುನಾವಣಾ ಆಯೋಗ ಹಂಚಿಕೊಂಡಿದ್ದು, ಅದನ್ನು ಟ್ವೀಟ್ ಮಾಡಿರುವ ಮೋದಿ ಅವರು ಒಂದು ಉತ್ತಮ ಕಾರ್ಯಕ್ರಮದ ಮೂಲಕ ಮತದಾನದ ಬಗ್ಗೆ ಜಾಗೃತಿ ಮೂಡಿಸಿದ್ದಾರೆ ಎಂದಿದ್ದಾರೆ.