ಬೈಂದೂರು: ಅನಾರೋಗ್ಯದಿಂದ ಮನನೊಂದು ಮಹಿಳೆ ಆತ್ಮಹತ್ಯೆ

ಬೈಂದೂರು ಮೇ.03: ಅನಾರೋಗ್ಯದ ಕಾರಣದಿಂದ ಮನನೊಂದು ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಯಡ್ತರೆ ಗ್ರಾಮದ ಮುಲ್ಲಿಮನೆ ಎಂಬಲ್ಲಿ ನಡೆದಿದೆ.

ಸ್ಥಳೀಯ ನಿವಾಸಿ ಭಾಗೀರಥಿ (50) ಆತ್ಮಹತ್ಯೆ ಮಾಡಿಕೊಂಡವರು.

ಇವರು ತಮಗಿದ್ದ ಅನಾರೋಗ್ಯಕ್ಕೆ ಚಿಕಿತ್ಸೆ ನೀಡಿದರೂ ಗುಣಮುಖವಾಗದ ಕಾರಣ ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ನಿನ್ನೆ ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ಸಮಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಮೃತರ ಅಣ್ಣ ನೀಡಿದ ದೂರಿನಂತೆ ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top