ಬೆಂಗಳೂರು : ರಾಜ್ಯದಲ್ಲಿ ಮತದಾನಕ್ಕೆ ಕ್ಷಣಗಣನೆ ಬೆನ್ನಲ್ಲೆ ಇದೀಗ ಮೋಚಾ ಚಂಡಮಾರುತ ಪ್ರಭಾವವು ಮತದಾನದ ಮೇಲೆ ಬೀರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೇ 10 ರಿಂದ 12 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದೆ.
ಪಶ್ಚಿಮ ಬಂಗಾಳಕೊಲ್ಲಿಯ ‘ಮೋಚಾ’ ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯದ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದು ಚಂಡಮಾರುತವಾಗಿ ಬದಲಾಗುವ ಸಾಧ್ಯತೆಯಿದೆ. ಇದರಿಂದ ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ಐದು ದಿನ ಮಳೆಯ ಪ್ರಮಾಣ ಅಧಿಕವಾಗಲಿದೆ.