ಉಡುಪಿ : ನಾಳೆ ರಾಜ್ಯಾದ್ಯಂತ ವಿಧಾನಸಭಾ ಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ ಇಂದು ಉಡುಪಿ ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಮಸ್ಟರಿಂಗ್ ಪ್ರಕ್ರಿಯೆ ಪ್ರಾರಂಭವಾಗಿದೆ.
ಉಡುಪಿಯ ಸೈಂಟ್ ಸಿಸಿಲಿಸ್ ಎಜುಕೇಶನ್ ಟ್ರಸ್ಟ್, ಕುಂದಾಪುರದ ಭಂಡಾರ್ಕಾಸ್ ಆರ್ಟ್ಸ್ ಮತ್ತು ಸಾಯನ್ಸ್ ಕಾಲೇಜು, ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜು, ಕಾಪು ದಂಡತೀರ್ಥ ಪಿಯು ಕಾಲೇಜು, ಕಾರ್ಕಳ ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಸ್ಟರಿಂಗ್ ಪ್ರಕ್ರಿಯೆ ಆರಂಭವಾಗಿದೆ.
ಮಸ್ಟರಿಂಗ್ ಕೇಂದ್ರದಿಂದ ಚುನಾವಣಾ ಬ್ಯಾಲೆಟ್ ಯುನಿಟ್, ಕಂಟ್ರೋಲ್ ಯುನಿಟ್, ವಿವಿ ಪ್ಯಾಟ್ ಯಂತ್ರಗಳನ್ನು ಪಡೆದುಕೊಂಡು ಸಿಬ್ಬಂದಿಗಳು ಆಗಮಿಸುತ್ತಿದ್ದಾರೆ.
ಜಿಲ್ಲೆಯಲ್ಲಿ ಒಟ್ಠು 1111 ಮತಗಟ್ಟೆಗಳು, ಒಟ್ಟು 176 ಬಸ್, 36 ಮಿನಿಬಸ್, 54 ಮ್ಯಾಕ್ಸಿಕ್ಯಾಬ್, 68 ಜೀಪ್ ಗಳನ್ನು ಚುನಾವಣಾ ಪ್ರಕ್ರಿಯೆಗಾಗಿ ಬಳಕೆ ಮಾಡಲಾಗುತ್ತಿದೆ.
ಇನ್ನು ಒಟ್ಟು 1336 ಬ್ಯಾಲೆಟ್ ಯುನಿಟ್ ಮತ್ತು ಕಂಟ್ರೋಲ್ ಯುನಿಟ್, 1446 ವಿ ವಿ ಪ್ಯಾಟ್ ಗಳ ಬಳಕೆ ಮಾಡಲಾಗುತ್ತಿದೆ.