ಕಾಪು: ಕಾಪು – ಶಿರ್ವ ರಸ್ತೆಯ ಮಲ್ಲಾರು ಚಂದ್ರನಗರ ಬಳಿ ರಿಕ್ಷಾದ ಮೇಲೆ ಮರ ಬಿದ್ದು ಇಬ್ಬರು ಮೃತಪಟ್ಟಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.
ಮೃತರನ್ನು ಪುಷ್ಪ(45) ಮತ್ತು ಕೃಷ್ಣ ಎಂದು ಗುರುತಿಸಲಾಗಿದೆ.
ಗಾಳಿ, ಮಳೆಯಿಂದಾಗಿ ರಿಕ್ಷಾದ ಮೇಲೆ ಬೃಹತ್ ದೂಪದ ಮರ ಉರುಳಿ ಬಿದ್ದಿದ್ದು ರಸ್ತೆ ಸಂಪೂರ್ಣ ಬಂದ್ ಆಗಿತ್ತು.
ರಿಕ್ಷಾದ ಮೇಲಿನಿಂದ ಮರ ತೆರವು ಗೊಳಿಸಲು ಒಂದು ಗಂಟೆಯಿಂದ ನಿರಂತರ ಪ್ರಯತ್ನ ನಡೆಸಿದ್ದು, ಸಾವಿರಾರು ಮಂದಿ ಸ್ಥಳದಲ್ಲಿ ಜಮಾಯಿಸಿದ್ದರು.
ಪೊಲೀಸ್, ಮೆಸ್ಕಾಂ, ಅಗ್ನಿಶಾಮಕ ದಳ ಸಹಿತ ನೂರಾರು ಮಂದಿ ಸ್ಥಳೀಯರು ರಕ್ಷಣಾ ಕಾರ್ಯ ನಡೆಸಿದ್ದಾರೆ.
ಕಾಪು: ಚಲಿಸುತ್ತಿದ್ದ ರಿಕ್ಷಾದ ಮೇಲೆ ಬಿದ್ದ ಮರ: ಇಬ್ಬರು ಮೃತ್ಯು
