ದಕ್ಷಿಣ ಕನ್ನಡ : ಪುತ್ತೂರಿನಲ್ಲಿ ಬಿಜೆಪಿ ನಾಯಕರ ಫೋಟೋಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ, ಚಪ್ಪಲಿ ಹಾರ ಹಾಕಿ ಬ್ಯಾನರ್ ಅಳವಡಿಕೆ..!!!

ಪುತ್ತೂರು : ಬಿಜೆಪಿ ನಾಯಕರ ಫೋಟೋಗಳನ್ನು ಹಾಕಿ ಭಾವಪೂರ್ಣ ಶ್ರದ್ಧಾಂಜಲಿ ಎಂದು ಬರೆದು, ಚಪ್ಪಲಿ ಹಾರ ಹಾಕಿರುವ ಬ್ಯಾನರ್ ಅನ್ನು ಅಳವಡಿಸಿರುವ ಘಟನೆ ಪುತ್ತೂರು ಸರ್ಕಾರಿ ಬಸ್ ನಿಲ್ದಾಣದ ಮುಂಭಾಗದಲ್ಲಿ ನಡೆದಿದೆ.

ಬಿಜೆಪಿ ನಾಯಕರಾಗಿರುವ ಮಾಜಿ ಸಿಎಂ ಸದಾನಂದ ಗೌಡ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರ ಭಾವಚಿತ್ರ ವಿರುವ ಬ್ಯಾನರ್ ನಲ್ಲಿ ‘ಭಾವಪೂರ್ಣ ಶ್ರದ್ಧಾಂಜಲಿ ಬಿಜೆಪಿ ಹೀನಾಯವಾಗಿ ಸೋಲಲು ಕಾರಣಕರ್ತರಾದ ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ, ನೊಂದ ಹಿಂದೂ ಕಾರ್ಯಕರ್ತರು’ ಎಂದು ಬರೆಯಲಾಗಿದೆ.

ಇನ್ನು ಈ ಬ್ಯಾನರ್ ಗೆ ಚಪ್ಪಲಿ ಹಾರವನ್ನು ಹಾಕಲಾಗಿದ್ದು, ಈ ಬ್ಯಾನರ್ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಪರ-ವಿರೋಧದ ಚರ್ಚೆ ನಡೆಯುತ್ತಿದೆ.

You cannot copy content from Baravanige News

Scroll to Top