ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಎಂಪಿ ಲತಾ ಮಲ್ಲಿಕಾರ್ಜುನ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಂಬಲ ಸೂಚಿಸಿದ್ದಾರೆ.
ಲತಾ ಮಲ್ಲಿಕಾರ್ಜುನ್ ಗೆ ರಾಜ್ಯ ವಿಧಾನಸಭಾ ಚುನಾವಣೆ ಕಾಂಗ್ರೆಸ್‌ನಿಂದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಬಿಜೆಪಿಯ ಹಾಲಿ ಶಾಸಕರಾಗಿದ್ದ ಜಿ.ಕರುಣಾಕರ ರೆಡ್ಡಿ ಅವರನ್ನು ಸೋಲಿಸಿ ಭರ್ಜರಿ ಗೆಲುವು ಪಡೆದುಕೊಂಡರು.
ಇನ್ನು ಪಕ್ಷೇತರ ಅಭ್ಯರ್ಥಿ ಎಂಪಿ ಲತಾ ಮಲ್ಲಿಕಾರ್ಜುನ್ ತಮ್ಮ ಪತಿಯೊಂಡನೆ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.