ಸುಳ್ಳು ವದಂತಿಗಳಿಗೆ ಬಲಿಯಾಗದಿರಿ, ಜ.19 ರವರೆಗೆ ವಾರಾಂತ್ಯ ಕರ್ಫ್ಯೂ, ನೈಟ್ ಕರ್ಫ್ಯೂ ಎಂದಿನಂತೆ ಜಾರಿ: ಜಿಲ್ಲಾಧಿಕಾರಿ

ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಜಾರಿ ಮಾಡಿರುವ ವಾರಾಂತ್ಯ ಕರ್ಫ್ಯೂವನ್ನು ಜಿಲ್ಲಾಧಿಕಾರಿಯವರು ರದ್ದುಪಡಿದ್ದಾರೆ ಎಂಬುದು ಸುಳ್ಳು ಸುದ್ದಿಯಾಗಿದೆ.

ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂ ಸರಕಾರದ ಆದೇಶದಂತೆ ಕಟ್ಟು ನಿಟ್ಟಾಗಿ ಜಾರಿಯಲ್ಲಿರಲಿದ್ದು, ಜಿಲ್ಲೆಯ ಜನತೆ ವದಂತಿಗಳಿಗೆ ಕಿವಿಕೊಡಬಾರದು ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಅವರು ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ವಾರಂತ್ಯ ಕರ್ಫ್ಯೂವನ್ನು ಜಿಲ್ಲಾಧಿಕಾರಿಯವರು ರದ್ದುಪಡಿಸಿರುತ್ತಾರೆ ಎಂಬ ವಿಡಿಯೋ ಒಂದು ಹರಿಡಾದುತ್ತಿದ್ದು, ಜನರಲ್ಲಿ ಗೊಂದಲ ಸೃಷ್ಟಿ ಮಾಡಿದೆ. ಇದು ಒಂದು ಸುಳ್ಳು ಸುದ್ದಿಯಾಗಿದ್ದು, ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ರದ್ದುಪಡಿಸಿಲ್ಲ. ಸರಕಾರದ ಆದೇಶದಂತೆ ಜ.19 ರ ಬೆಳಿಗ್ಗೆ 5.00 ಗಂಟೆವರೆಗೆ ಜಿಲ್ಲಾದ್ಯಂತ ನೈಟ್ ಕರ್ಫ್ಯೂ ಹಾಗೂ ವಾರಂತ್ಯ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿಯಲ್ಲಿರುತ್ತದೆ. ಇದರಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ ಎಂದು ತಿಳಿಸಿದ್ದಾರೆ.

You cannot copy content from Baravanige News

Scroll to Top