ಸಿದ್ದರಾಮಯ್ಯಗೆ ಸಿಎಂ ಪಟ್ಟ ಸಾಧ್ಯತೆ : ಘೋಷಣೆಯೊಂದೇ ಬಾಕಿ

ನವದೆಹಲಿ : ಕರ್ನಾಟಕದ ನೂತನ ಮುಖ್ಯಮಂತ್ರಿ ಆಯ್ಕೆಗೆ ಕಾಂಗ್ರೆಸ್ ಪಾಳೆಯದಲ್ಲಿ ಬಿಕ್ಕಟ್ಟು ಶಮನವಾಗುವ ಲಕ್ಷಣ ಗೋಚರಿಸಿದೆ. ರಾಜ್ಯದ ಮುಂದಿನ ಸಿಎಂ ಸಿದ್ದರಾಮಯ್ಯ ಅವರೇ ಆಗಲೆಂದು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದ್ದು, ಬಹುತೇಕ ಪಕ್ಕಾ ಆಗಿದೆ.


ಈ ಹಿನ್ನೆಲೆಯಲ್ಲಿ ಸಿದ್ದು ಅವರ ಹೆಸರನ್ನು ಶಾಸಕಾಂಗ ಸಭೆಯಲ್ಲಿ ಅಧಿಕೃತವಾಗಿ ಘೋಷಣೆ ಮಾಡಲಾಗುತ್ತದೆ. ಆದರೆ ಡಿ.ಕೆ.ಶಿವಕುಮಾರ್ ಅವರಿಗೆ ಯಾವ ಸ್ಥಾನಮಾನಗಳನ್ನು ನೀಡಲಾಗುತ್ತದೆ ಎಂಬ ಬಗ್ಗೆ ತಿಳಿದುಬಂದಿಲ್ಲ. ಮಾಧ್ಯಮಗಳ ವರದಿ ಪ್ರಕಾರ, ಈಗಾಗಲೇ ಡಿಕೆಶಿ ‘ಕೊಟ್ಟರೆ ಸಿಎಂ ಸ್ಥಾನ ಕೊಡಿ. ಇಲ್ಲವಾದರೆ ಶಾಸಕನಾಗಿ ಮುಂದುವರಿಯುತ್ತೇನೆ’ ಎಂದಿದ್ದಾರೆ ಎಂಬುದು ತಿಳಿದುಬಂದಿದೆ.

ಡಿ.ಕೆ.ಶಿವಕುಮಾರ್ ಅವರಿಗೆ ಡಿಸಿಎಂ ಸ್ಥಾನ ನೀಡಿ ಎರಡು ಪ್ರಬಲ ಖಾತೆ ನೀಡುವ ಸಾಧ್ಯತೆ ಇದೆ. ಎಲ್ಲವೂ ಇಂದು ಸಂಜೆಯೊಳಗೆ ಎಲ್ಲವೂ ಪಕ್ಕ ಆಗುವ ಸಾಧ್ಯತೆ ಇದೆ.

You cannot copy content from Baravanige News

Scroll to Top