‘ಕರೆಂಟ್ ಬಿಲ್ ಕೊಡಬೇಡಿ, ಕಟ್ಟಲ್ಲ’, ಮೀಟರ್ ಬೋರ್ಡ್ಗೆ ಚೀಟಿ ಅಂಟಿಸಿದ ಪೆರಂಪಳ್ಳಿ ನಿವಾಸಿ

ಉಡುಪಿ : ಕರೆಂಟ್ ಬಿಲ್ ಕಟ್ಟುವುದಿಲ್ಲ ಎಂದು ಮೀಟರ್ ಬೋರ್ಡ್ ಮುಂದೆ ಚೀಟಿ ಬರೆದು ಅಂಟಿಸಿ ಮೆಸ್ಕಾಂಗೆ ಕರೆಂಟ್ ಬಿಲ್ ಕಟ್ಟದಿರುವ ಬಗ್ಗೆ ಸಂದೇಶ ರವಾನಿಸಿದ್ದಾರೆ.


ಉಡುಪಿಯ ಪೆರಂಪಳ್ಳಿ ನಿವಾಸಿ ವಾಸುದೇವ ಭಟ್ ತಮ್ಮ ಮನೆಯ ಮೀಟರ್ ಬೋರ್ಡ್ಗೆ “ಮೆಸ್ಕಾಂನವರೆ ಕ್ಷಮಿಸಿ, ಜೂನ್ ತಿಂಗಳಿಂದ ನಮಗೆ ಕರೆಂಟ್ ಬಿಲ್ ಕೊಡಬೇಡ್. ನಾವು ಬಿಲ್ ಕಟ್ಟಲ್ಲ” ಎಂದು ಚೀಟಿ ಅಂಟಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಬಂದರೆ ಜೂನ್ ತಿಂಗಳಿಂದಲೇ ಉಚಿತ ವಿದ್ಯುತ್ ಕೊಡುವ ಯೋಜನೆ ಘೋಷಣೆಯಾಗಿದೆ. ಹೀಗಾಗಿ ನಾನು ಸೇರಿದಂತೆ ಯಾರೂ ವಿದ್ಯುತ್ ಬಿಲ್ ಪಾವತಿ ಮಾಡಬೇಕಾಗಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಶೇಕಡಾ 95 ಜನತೆ ಇದರ ಲಾಭ ಪಡೆಯಬಹುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಅವರು ಶೇಕಡಾ 95ರ ಒಳಗೆ ನಾನು ಕೂಡ ಬರುತ್ತೇನೆ. ನಾನು ಕೂಡ ಸರ್ಕಾರದ ಈ ಯೋಜನೆಯ ಫಲಾನುಭವಿ ಎಂಬುದು ದೃಢ ಆಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಿದೆ. ನಾನು ವಿದ್ಯುತ್ ಬಿಲ್ ಕಟ್ಟೋದಿಲ್ಲ ಎಂದು ಅವರು ತಮ್ಮ ವಾದ ಮಂಡಿಸಿದ್ದಾರೆ.

ನಾನು ತಿಂಗಳಿಗೆ 200 ಯೂನಿಟ್ ಖರ್ಚು ಮಾಡುತ್ತಿಲ್ಲ. ಹೀಗಾಗಿ ನಾನು ಫಲಾನುಭವಿ ಆಗಿರುವುದರಿಂದ ಮೀಟರ್ ಬೋರ್ಡಿನಲ್ಲಿ ಫಲಕ ಹಾಕಿದ್ದೇನೆ ಎಂದು ವಾಸುದೇವ ಭಟ್ ಪೆರಂಪಳ್ಳಿ ತಿಳಿಸಿದ್ದಾರೆ.

ಹೀಗೆ ಮೀಟರ್ ಬೋರ್ಡ್ಗೆ ಚೀಟಿ ಅಂಟಿಸಿದ ಕಾರಣವನ್ನು ಸಹ ತಿಳಿಸಿದ ಅವರು, “ನಾನು ಇಲ್ಲದಿರುವಾಗ ಮೆಸ್ಕಾಂನವರು ಬಂದರೆ ಅವರಿಗೆ ಗೊತ್ತಾಗಲಿ ಎಂದು ಬೋರ್ಡ್ ಅಳವಡಿಸಿದ್ದೇನೆ . ನನಗೆ ಮೆಸ್ಕಾಂನವರು ಕರೆಂಟ್ ಬಿಲ್ ಕೊಡಬೇಕಾಗಿಲ್ಲನಾನು ಸರಕಾರಕ್ಕೆ ತೆರಿಗೆ ಕಟ್ಟುತ್ತಿರುವುದರಿಂದ ಈ ಯೋಜನೆಗೆ ಅರ್ಹ ಫಲಾನುಭವಿ ಆಗಿದ್ದೇನೆ” ಎಂದು ಹೇಳಿದ್ದಾರೆ.

You cannot copy content from Baravanige News

Scroll to Top