ದಕ್ಷಿಣ ಕನ್ನಡ : ಅವಹೇಳನಕಾರಿ ಬ್ಯಾನರ್ ಪ್ರಕರಣ : ಆರೋಪಿಗಳ ಮೇಲೆ ಪೋಲೀಸರಿಂದ ಥರ್ಡ್ ಡಿಗ್ರಿ ಟ್ರೀಟ್ಮೆಂಟ್

ದಕ್ಷಿಣ ಕನ್ನಡ : ಪುತ್ತೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ವಿರುದ್ಧ ಅವಹೇಳನಕಾರಿ ಬ್ಯಾನರ್ ಹಾಕಿದ ವಿಚಾರವಾಗಿ ಬಂಧಿರತ ಆರೋಪಿಗಳ ಮೇಲೆ ಪೋಲಿಸರು ದೌರ್ಜನ್ಯ ಎಸಗಿರುವ ಘಟನೆ ನಡೆದಿದೆ.



ಬ್ಯಾನರ್ ಅಳವಡಿಕೆಗೆ ಸಂಬಂಧಿಸಿದಂತೆ ಪುತ್ತೂರು ನಗರಸಭಾ ಆಯುಕ್ತ ಮಧು ಮನೋಹರ್ ದೂರು ನೀಡಿದ್ದರು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಜನರನ್ನು ಪೋಲೀಸರು ವಶಕ್ಕೆ ಪಡೆದಿದ್ದರು. ಆರೋಪಿಗಳನ್ನು ಒಂದು ದಿನ ಪೂರ್ತಿ ಹಲ್ಲೆ ನಡೆಸಿ ಪೋಲೀಸರು ಬಿಟ್ಟಿದ್ದಾರೆಂದು ಹೇಳಲಾಗಿದೆ.

ಪುತ್ತೂರು ಡಿವೈಎಸ್ಪಿ ನೇತೃತ್ವದಲ್ಲಿ ಆರೋಪಿಗಳಿಗೆ ಥರ್ಡ್ ಡಿಗ್ರಿ ಟ್ರೀಟ್ಮೆಂಟ್ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಸದ್ಯ ದೌರ್ಜನ್ಯ ನಡೆಸಿದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.

You cannot copy content from Baravanige News

Scroll to Top