ಪುತ್ತೂರಿಗೆ ಇಂದು ಯತ್ನಾಳ್ : ಪೊಲೀಸರಿಂದ ದೌರ್ಜನ್ಯಕ್ಕೊಳಗಾದ ಕಾರ್ಯಕರ್ತರ ಭೇಟಿ

ಪುತ್ತೂರು : ಪೊಲೀಸರ ದೌರ್ಜನ್ಯಕ್ಕೆ ಒಳಗಾದ ಹಿಂದೂ ಕಾರ್ಯಕರ್ತರ ಭೇಟಿ ಮಾಡುವ ಸಲುವಾಗಿ ಇಂದು ಪುತ್ತೂರಿಗೆ ಬಸನಗೌಡ ಪಾಟೀಲ್ ಯತ್ನಾಳ್‌ ಅವರು ಭೇಟಿ ನೀಡಿ ಮಾತನಾಡಿಸಲಿದ್ದಾರೆ. ಇದೇ ವೇಳೆ ಹಲ್ಲೆ ಮಾಡಿದ ಪೊಲೀಸರ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಯತ್ನಾಳ್ ಅವರು ಪುತ್ತಿಲರಿಗೆ ದೂರವಾಣಿ ಕರೆ ಮಾಡಿ ಈ ವಿಚಾರ ತಿಳಿಸಿದ್ದಾರೆ.

ಇನ್ನು ಪೊಲೀಸರ ದೌರ್ಜನ್ಯ ವಿರುದ್ದ ಪೊಲೀಸರ ದೌರ್ಜನ್ಯ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು.ಪೊಲೀಸರ ದೌರ್ಜನ್ಯ ಪುತ್ತೂರು ಡಿವೈಎಸ್‌ಪಿ ವೀರಯ್ಯ ಹೀರೇಮಠ್ ವಿರುದ್ಧ ಇಲಾಖೆ ಕ್ರಮಕ್ಕೆ ಮೇಲಾಧಿಕಾರಿಗಳಿಗೆ ವರದಿ ನೀಡಲಾಗಿದೆ.

ಸರ್ಕಾರಿ ಬಸ್ ನಿಲ್ದಾಣದ ಮುಂಭಾಗ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಡಿ.ವಿ.ಸದಾನಂದ ಗೌಡರ ಭಾವಚಿತ್ರ ಇರುವ ಫ್ಲೆಕ್ಸ್ ಅಳವಡಿಸಿ ಅದಕ್ಕೆ ಚಪ್ಪಲಿ ಹಾರ ಹಾಕಿದ ಪ್ರಕರಣದ ಹಿನ್ನಲೆಯಲ್ಲಿ 9 ಜನ ಹಿಂದೂ ಕಾರ್ಯಕರ್ತರನ್ನು ಬಂಧಿಸಲಾಗಿತ್ತು. ಒಂಬತ್ತು ಮಂದಿ ಆರೋಪಿಗಳ ವಿರುದ್ದ ಪೊಲೀಸರು ದೌರ್ಜನ್ಯವೆಸಗಿರುವ ಚಿತ್ರ ವ್ಯಾಪಕವಾಗಿ ವೈರಲ್ ಆಗಿತ್ತು. ಇದಲ್ಲದೇ ದೌರ್ಜನ್ಯಕ್ಕೊಳಗಾದ ಅವಿನಾಶ್ ನೀಡಿದ ದೂರಿನ್ವಯ ಪೊಲೀಸರು ಪ್ರಕರಣ ದಾಖಲಿಸಿದ್ದು ಇಬ್ಬರು ಪೊಲೀಸರನ್ನು ಅಮಾನತುಗೊಳಿಸಲಾಗಿತ್ತು.

You cannot copy content from Baravanige News

Scroll to Top