ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಶನಿವಾರ ಮಧ್ಯಾಹ್ನ ಪ್ರಮಾಣವಚನ ಸ್ವೀಕರಿಸಿದರು. ಅವರೊಂದಿಗೆ ಉಪ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಜ್ಞಾವಿಧಿ ಸ್ವೀಕರಿಸಿದರು.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

ಜೊತೆಗೆ ಎಂಟು ಮಂದಿ ಶಾಸಕರು ಸಚಿವರಾಗಿಯೂ ಪದಗ್ರಹಣ ಮಾಡಿದರು. ಇದರೊಂದಿಗೆ, ರಾಜ್ಯದಲ್ಲಿ ಹೊಸ ಸರ್ಕಾರ ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಂತಾಗಿದೆ. ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕಾಂಗ್ರೆಸ್ ನಾಯಕರು, ರಾಜ್ಯ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು, ಬೆಂಬಲಿಗರು ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಸಾಕ್ಷಿಯಾದರು.

ದೇವರ ಹೆಸರಿನಲ್ಲಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಿದರೆ, ಶ್ರೀ ಗಂಗಾಧರ ಅಜ್ಜನ ಹೆಸರಿನಲ್ಲಿ ಡಿಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದರು.

Scroll to Top