ನವದೆಹಲಿ : ಚಲಾವಣೆಯಿಂದ ಹಿಂಪಡೆದಿರುವ 2,000 ರೂ. ಮುಖಬೆಲೆಯ ನೋಟುಗಳನ್ನು ಮಂಗಳವಾರದಿಂದ ಬ್ಯಾಂಕುಗಳಿಗೆ ನೀಡಿ ಬದಲಾಯಿಸಿಕೊಳ್ಳಬಹುದು ಅಥವಾ ಡೆಪಾಸಿಟ್ ಮಾಡಿಕೊಳ್ಳಬಹುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ತಿಳಿಸಿದೆ.
ಆರ್‌ಬಿಐ ಚಲಾವಣೆಯಿಂದ ಹಿಂಪಡೆದಿರುವ 2,000 ರೂ. ಮುಖಬೆಲೆಯ ನೋಟುಗಳನ್ನು ಎಲ್ಲ ಬ್ಯಾಂಕ್‌ಗಳಲ್ಲಿ ಬದಲಾಯಿಸಿಕೊಳ್ಳಬಹುದು. ನಿಮ್ಮ ಹತ್ತಿರದ ಬ್ಯಾಂಕ್ ಶಾಖೆಯಲ್ಲಿ ನೀವು ನೋಟುಗಳನ್ನು ಬದಲಾಯಿಸಿಕೊಳ್ಳಬಹುದು. ಅದಲ್ಲದೇ ಆರ್‌ಬಿಐನ 19 ಪ್ರಾದೇಶಿಕ ಕಚೇರಿಗಳಲ್ಲಿ ನೀವು 2,000 ರೂ. ನೋಟುಗಳನ್ನು ಬದಲಿಸಿಕೊಳ್ಳಬಹುದು.
ನೋಟುಗಳ ವಿನಿಮಯಕ್ಕೆ ಅರ್ಜಿ ಬೇಕಿಲ್ಲ:
ಸಾರ್ವಜನಿಕರು ಬ್ಯಾಂಕ್‌ಗಳಲ್ಲಿ 2,000 ರೂ. ಮುಖಬೆಲೆಯ ನೋಟುಗಳ ವಿನಿಮಯಕ್ಕೆ ಯಾವುದೇ ನಮೂನೆಯನ್ನು ಭರ್ತಿ ಮಾಡುವ ಅಗತ್ಯವಿಲ್ಲ. ಆರ್‌ಬಿಐ ಘೋಷಣೆಯ ಬಳಿಕ ರಿಕ್ವೆಸ್ಟ್ ಫಾರ್ಮ್ ಅನ್ನು ಭರ್ತಿ ಮಾಡಿ ನೋಟು ಬದಲಾವಣೆ ಮಾಡಬೇಕು ಎಂಬ ಸುದ್ದಿ ಹರಿದಾಡಿತ್ತು. ಆದರೆ ಭಾನುವಾರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಲ್ಲ ವದಂತಿಗಳಿಗೆ ಸ್ಪಷ್ಟನೆ ನೀಡಿದ್ದು, ಯಾವುದೇ ಫಾರ್ಮ್ ಅನ್ನು ಭರ್ತಿ ಮಾಡುವ ಅಗತ್ಯವಿಲ್ಲ ಎಂದಿದೆ.
ಗುರುತಿನ ಚೀಟಿ ಬೇಕಾ.!!?
ನೋಟುಗಳ ವಿನಿಮಯ ಹಾಗೂ ಠೇವಣಿಗೆ ಗುರುತಿನ ಚೀಟಿ ನೀಡುವ ಅಗತ್ಯವಿಲ್ಲ ಎಂದು ಎಸ್‌ಬಿಐ ಸ್ಪಷ್ಟಪಡಿಸಿದೆ. ಆದ್ದರಿಂದ ನಿರಾತಂಕವಾಗಿ 2,000 ರೂ. ನೋಟು ಬದಲಾಯಿಸಿಕೊಳ್ಳಬಹುದು.