ಆರ್‌ಎಸ್‌ಎಸ್‌ ನಿಷೇಧ ಅನ್ನೋದು ಸರಿಯಲ್ಲ, ರಾಜ್ಯದ ಜನತೆ ನೀಡಿರುವ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳಿ; ಮಹೇಶ್ ಟೆಂಗಿನಕಾಯಿ

ಹುಬ್ಬಳ್ಳಿ, ಮೇ.25: ಪಿಎಫ್ ಐ, ಎಸ್ ಡಿಪಿಐ ಜೊತೆ ಬಜರಂಗದಳ, ಆರ್‌ಎಸ್‌ಎಸ್‌ ಹೋಲಿಸಿ ಅನಗತ್ಯವಾಗಿ ಸಮಸ್ಯೆಯನ್ನು ಮೈಮೇಲೆ ಎಳೆದುಕೊಳ್ಳಬೇಡಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಹುಬ್ಬಳ್ಳಿ ಧಾರವಾಡ ಕೇಂದ್ರ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಶಾಂತಿ ಕದಡಿದರೆ ಭಜರಂಗದಳ ಮತ್ತು ಆರ್‌ಎಸ್‌ಎಸ್‌ನಂತಹ ಸಂಘಟನೆಗಳನ್ನು ತಮ್ಮ ಸರ್ಕಾರ ನಿಷೇಧಿಸುತ್ತದೆ, ಒಂದು ವೇಳೆ ಬಿಜೆಪಿ ನಾಯಕರಿಗೆ ಅದನ್ನು ಒಪ್ಪಿಕೊಳ್ಳಲು ಸಾಧ್ಯವಾಗದಿದ್ದರೆ ಪಾಕಿಸ್ತಾನಕ್ಕೆ ಹೋಗಬಹುದು ಎಂದು ಪ್ರಿಯಾಂಕ್ ಖರ್ಗೆ ಹೇಳಿಕೆ ವಿಚಾರವಾಗಿ ಮಾತನಾಡಿದ ಶಾಸಕ ಮಹೇಶ್ ” ಕರ್ನಾಟಕ ರಾಜ್ಯದ ಜನತೆ ನಿಮಗೆ ಬಹುಮತ ಕೊಟ್ಟಿದ್ದಾರೆ. ಚುನಾವಣೆ ಸಂದರ್ಭದಲ್ಲಿ ನೀವು ನೀಡಿರುವ ಗ್ಯಾರಂಟಿ ಬಗ್ಗೆ ಮಾತಾಡಿ. 10 ಕೆಜಿ ಅಥವಾ 15 ಕೆಜಿ ಅಕ್ಕಿ ಕೊಡುತ್ತೀರೋ, ವಿದ್ಯುತ್ ಕೊಡುತ್ತೀರೋ ಹೇಳಿ ಎಂದು ಪ್ರಶ್ನಿಸಿದ್ದಾರೆ

ಗ್ಯಾರಂಟಿ ಜಾರಿ ಮಾಡದೆ ವಿಷಯಾಂತರ ಮಾಡಲು ಪ್ರಯತ್ನಿಸಬೇಡಿ. ಬಜರಂಗದಳ, ಆರ್‌ಎಸ್‌ಎಸ್‌ ನಿಷೇಧಿಸುತ್ತೇವೆ ಅನ್ನೋದು ಸರಿಯಲ್ಲ. ರಾಜ್ಯದ ಜನ ನಿಮಗೆ ನೀಡಿರುವ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

Scroll to Top