ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ

ನವದೆಹಲಿ, ಜೂ.01: ಜೂನ್ ತಿಂಗಳ ಆರಂಭದ ದಿನವಾದ ಇಂದು ಗ್ಯಾಸ್ ವಿತರಣಾ ಕಂಪನಿಗಳು ಸಿಹಿಸುದ್ದಿ ನೀಡಿದ್ದು ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ.

19 ಕೆಜಿ ವಾಣಿಜ್ಯ ಎಲ್​ಪಿಜಿ ಸಿಲಿಂಡರ್ ಬೆಲೆಯನ್ನು ಕಡಿತಗೊಳಿಸಿದ್ದು, ಪರಿಣಾಮ 83.50 ರೂ.ಗೆ ಇಳಿಕೆಯಾಗಿದ್ದು, ಈ ಮೂಲಕ 19 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆ 1,773 ರೂ.ಗೆ ತಲುಪಿದೆ. ಮೇ 1 ರಂದು ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು 1720ರೂ.ಗೆ ಇಳಿಸಲಾಗಿತ್ತು

ಅದರೂ, ಈ ದರ ಕಡಿತವು ವಾಣಿಜ್ಯ ಅನಿಲ ಸಿಲಿಂಡರ್ ಬಳಕೆದಾರರಿಗೆ ಮಾತ್ರ. ಗೃಹ ಬಳಕೆಯ ಎಲ್ ಪಿಜಿ ಅನಿಲ ಗ್ರಾಹಕರಿಗೆ ಬೆಲೆಯಲ್ಲಿ ಯಾವುದೇ ಪರಿಷ್ಕರಣೆಯಾಗಿಲ್ಲ.

You cannot copy content from Baravanige News

Scroll to Top