ಮಂಗಳೂರು: ಸೋಮೇಶ್ವರ ಬೀಚ್ನಲ್ಲಿ ನೈತಿಕ ಪೊಲೀಸ್ ಗಿರಿ ಹೆಚ್ಚಾಗಿದೆ. ಕೇರಳ ಮೂಲದ ಮೂವರು ಮುಸ್ಲಿಂ ಯುವಕರು ಹಿಂದೂ ವಿದ್ಯಾರ್ಥಿನಿಯರ ಜೊತೆ ಸೋಮೇಶ್ವರ ಬೀಚ್ಗೆ ತೆರಳಿದ್ರು. ಈ ಹಿನ್ನೆಲೆ ತಂಡವೊಂದು ಸಮುದ್ರ ತೀರದಲ್ಲೇ ಮೂವರು ಯುವಕರ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.
ಹಲ್ಲೆಗೊಳಗಾದವರು ಕೇರಳದ ಚೆರ್ಕಳ ಹಾಗೂ ಕಾಸರಗೋಡಿನ ಜಾಫರ್ ಶರೀಫ್, ಮುಜೀಬ್ ಮತ್ತು ಆಶಿಕ್ ಎಂದು ತಿಳಿದುಬಂದಿದೆ.
ಹಲ್ಲೆಯಿಂದ ಗಾಯಗೊಂಡ ಮೂವರು ಯುವಕರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು, ಜೊತೆಗಿದ್ದ ಮೂವರು ವಿದ್ಯಾರ್ಥಿನಿಯರು ಕೇರಳಕ್ಕೆ ತೆರಳಿರುವ ಮಾಹಿತಿ ಸಿಕ್ಕಿದೆ. ಸದ್ಯ, ಉಳ್ಳಾಲ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.