ನವದೆಹಲಿ: ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ನಡೆದ ತ್ರಿವಳಿ ರೈಲುಗಳ ಅಪಘಾತ ದುರಂತ ಘಟನೆ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತುರ್ತು ಸಭೆ ಕರೆದಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.
ಪರಿಸ್ಥಿತಿಯನ್ನು ಅವಲೋಕಿಸಲು ಪ್ರಧಾನಿ ಮೋದಿಯವರು ತುರ್ತು ಸಭೆಯನ್ನು ಕರೆದಿದ್ದು, ಸಂಬಂಧಿತ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.
ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲು ಮದ್ಯೆ ಅಪಘಾತ ಸಂಭವಿಸಿತ್ತು. ಈ ಅವಘಡದಲ್ಲಿ ಕನಿಷ್ಠ 233 ಮಂದಿ ಮೃತಪಟ್ಟು, ಸುಮಾರು 900ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.