ನೈತಿಕ ಪೊಲೀಸ್ ಗಿರಿ ತಡೆಗೆ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು ಸೂಚನೆ

ಮಂಗಳೂರು: ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.

ಮಂಗಳೂರಿನಲ್ಲಿ ಪಶ್ಚಿಮ ವಲಯದ ದ.ಕ., ಉಡುಪಿ, ಉ.ಕ., ಚಿಕ್ಕಮಗಳೂರು, ಉಡುಪಿ ಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ಸಭೆಯ ಬಳಿಕ ಗೃಹ‌ ಸಚಿವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಕೋಮು‌ಸೌಹಾರ್ದ ಕಾಪಾಡಲು ಕಠಿನ ಕ್ರಮಕ್ಕೆ ಪೊಲೀಸರಿಗೆ ಸೂಚನೆ‌ ನೀಡಿದ್ದೇನೆ ಎಂದ ಅವರು ಮುಂದೆ‌ ಬೇರೆ ಕಡೆ ಅಗತ್ಯ‌ ಬಿದ್ದರೆ ಅಲ್ಲಿಯೂ ವಿಂಗ್ ರಚಿಸಲಾಗುವುದು ಎಂದು ಹೇಳಿದರು.

ಇಲ್ಲಿನ‌ ಜನರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಬೇಕಾಗಿದೆ. ಡ್ರಗ್ಸ್ ನಿಯಂತ್ರಣಕ್ಕೆ ಅಭಿಯಾನ ನಡೆಸಲು ಸೂಚಿಸಿದ್ದು, ಆ.15 ರೊಳಗೆ ಡ್ರಗ್ಸ್ ಚಟುವಟಿಕೆ ಹತ್ತಿಕ್ಕಲು ಗಡುವು ನೀಡಿದ್ದೇನೆ ಎಂದರು.

You cannot copy content from Baravanige News

Scroll to Top