ಬೆಂಗಳೂರು, ಜೂ 09: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ‘ಶಕ್ತಿ’ ಯೋಜನೆಗೆ ರಾಜ್ಯಾದ್ಯಂತ ಏಕಕಾಲಕ್ಕೆ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ಪ್ರಮುಖ ಗ್ಯಾರಂಟಿಗಳಲ್ಲಿ ಮೊದಲ ಗ್ಯಾರಂಟಿ ‘ಶಕ್ತಿ’ ಯೋಜನೆ ಜೂನ್ 11 ರಂದು ಜಾರಿಗೆ ಬರಲಿದೆ.
ಇನ್ನು ಕೇಂದ್ರ ಸರ್ಕಾರದ ಬೆಲೆ ಏರಿಕೆ, ಹಣದುಬ್ಬರದ ಕಾರಣಕ್ಕೆ ಸಂಕಷ್ಟಕ್ಕೆ ತುತ್ತಾಗಿರುವ ಕನ್ನಡ ನಾಡಿನ ಮಹಿಳಾ ಸಮೂಹಕ್ಕೆ ಕೊಂಚ ನಿರಾಳ ನೀಡುವ ಶಕ್ತಿ ಯೋಜನೆಯ ಚಾಲನೆ ಅತ್ಯಂತ ಅರ್ಥಪೂರ್ಣವಾಗಿ ನಡೆಸಬೇಕು. ಯಾವುದೇ ಜಾತಿ, ಧರ್ಮದ ಮಿತಿಗೆ ಒಳಪಡದ ಶಕ್ತಿ ಯೋಜನೆಯ ಅನುಕೂಲ ಅರ್ಹರಿಗೆಲ್ಲಾ ತಲುಪುವಂತೆ ನೋಡಿಕೊಳ್ಳಬೇಕು ಎಂದು ಸಚಿವರು ಮತ್ತು ಶಾಸಕರುಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.