ಉಡುಪಿ, ಜೂ.09: ಹಾಸ್ಟೆಲ್‌ನಿಂದ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯನ್ನು ಚುಡಾಯಿಸಿದ ಎಂದು ರೋಡ್ ರೋಮಿಯೋಗೆ ಯುವತಿ ಚಪ್ಪಲಿಯಿಂದ ಬಾರಿಸಿರೋ ಘಟನೆ ಕುಂದಾಪುರ ತಾಲೂಕಿನ ಒಕ್ವಾಡಿ ರಸ್ತೆಯಲ್ಲಿ ನಡೆದಿದೆ.
ಬಾರ್ಕೂರು ಮೂಲದ ನಜೀರ್ (35) ಎಂಬಾತ ಹಿಂದಿನಿಂದ ಬಂದು ವಿದ್ಯಾರ್ಥಿನಿಗೆ ಕಿರುಕುಳ ನೀಡಿ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಕೂಡಲೇ ವಿದ್ಯಾರ್ಥಿನಿಯು ಆತನಿಗೆ ಚಪ್ಪಲಿಯಿಂದ ಹೊಡೆದು ಸ್ಥಳೀಯರಿಗೆ ಮಾಹಿತಿ ನೀಡಿದ್ದಾಳೆ.
ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತಿಸಿದ ರೋಡ್ ರೋಮಿಯೋ ವಿರುದ್ಧ ಕೇಸ್ ದಾಖಲಾಗಿದೆ.