ಕಾಪು: ಬಸ್ ಮತ್ತು ಬೈಕ್ ನಡುವೆ ಅಪಘಾತ – ಸವಾರ ಸ್ಥಳದಲ್ಲೇ ಮೃತ್ಯು

ಕಟಪಾಡಿ : ಬಸ್ ಮತ್ತು ಬೈಕ್ ನಡುವೆ ರಾಷ್ಟೀಯ ಹೆದ್ದಾರಿ 66ರ ಪೂರ್ವ ಭಾಗದ ಸರ್ವಿಸ್ ರಸ್ತೆಯಲ್ಲಿ ಅಪಘಾತ ನಡೆದು ಓರ್ವ ಸಾವನ್ನಪ್ಪಿರುವ ಘಟನೆ ಜೂ.11 ರಂದು ಬೆಳಿಗ್ಗೆ ನಡೆದಿದೆ.


ಮೃತರನ್ನು ಹೂವಿನ ವ್ಯಾಪಾರವನ್ನು ಮಾಡುತ್ತಿದ್ದ ಕಟಪಾಡಿ ಸರಕಾರಿ ಗುಡ್ಡೆ ನಿವಾಸಿ ಇಕ್ಬಾಲ್ (32) ಎಂದು ಗುರುತಿಸಲಾಗಿದೆ.

ಬಸ್‌ ಉಡುಪಿಯಿಂದ ಮಂಗಳೂರು ಕಡೆ ಹೋಗುತ್ತಿದ್ದು, ಈ ವೇಳೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟಿದ್ದು ಸಾರ್ವಜನಿಕರ ಸಹಕಾರದಿಂದ ಆಸ್ಪತ್ರೆಗೆ ಸಾಗಿಸಲಾಗಿದೆ.

ಕಾಪು ಪೊಲೀಸರು ಸ್ಥಳಕ್ಕಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

You cannot copy content from Baravanige News

Scroll to Top