ಹೆಬ್ರಿ: ಬಸ್ ಮತ್ತು ಕಾರು ನಡುವೆ ಅಪಘಾತ : ಉಡುಪಿಯ ಇಬ್ಬರು ಶಿಕ್ಷಕರು ಮೃತ್ಯು..!!

ಹೆಬ್ರಿ : ಸೀತಾನದಿ ಜಕ್ಕನಮಕ್ಕಿ ಬಳಿ ಕಾರು ಅಪಘಾತದಲ್ಲಿ ಉಡುಪಿ ಮೂಲದ ಇಬ್ಬರು ಶಿಕ್ಷಕರು ಮೃತಪಟ್ಟು, ಇನ್ನೋರ್ವ ಶಿಕ್ಷಕರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.

ಮೃತರನ್ನು ಉಡುಪಿ ಡಿಡಿಪಿಐ ಆಫೀಸ್ ನ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಬ್ಬಣ್ಣ ಗಾಣಿಗ ಹಾಗೂ ಉಡುಪಿ ಇಂದಿರಾ ನಗರ ಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿರುವ ಸೋಮ ಶೇಖರ ಎಂದು ಗುರುತಿಸಲಾಗಿದೆ.

ಉಡುಪಿಯಿಂದ ಆಗುಂಬೆ ಹೋಗುತ್ತಿರುವ ಬಸ್ ಹಾಗೂ ಚೆನ್ನಗಿರಿಯಲ್ಲಿ ಮದುವೆ ಮುಗಿಸಿ ಉಡುಪಿಗೆ ಬರುತ್ತಿರುವ ಶಿಕ್ಷಕರ ಕಾರಿನ ನಡುವೆ ಅಪಘಾತ ನಡೆದಿದೆ.

ಇನ್ನು ಗಂಭೀರ ಗಾಯಗೊಂಡ ಶಿಕ್ಷಕ ಸುದರ್ಶನ ಹಾಗೂ ಕಾರು ಚಲಾಯಿಸುತ್ತಿದ್ದ ಸತೀಶ್ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆಂಬುಲೆನ್ಸ್ ಸಿಗದೆ ಯಾರು ಸಹಾಯಕ್ಕೆ ಬಾರದೆ ಇರುವುದನ್ನು ಗಮನಿಸಿ ಈ ಮಾರ್ಗದಲ್ಲಿ ಹೋಗುತ್ತಿದ್ದ ಪ್ರಮೋದ್ ಎಂಬವರು ನಾಲ್ವರನ್ನು ತನ್ನ ಕಾರಿಗೆ ಹಾಕಿಕೊಂಡು ಬಂದು ಹೆಬ್ರಿ ಸರಕಾರಿ ಆಸ್ಪತ್ರೆ ಸೇರಿಸಿದ್ದಾರೆ.

You cannot copy content from Baravanige News

Scroll to Top