ಮಹಾ ಮಳೆ: ಕರ್ನಾಟಕದಾದ್ಯಂತ ಮತ್ತೆ ಮೂರು ದಿನ yellow alert

ಕರ್ನಾಟಕದ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ಬೆಂಗಳೂರಿನಲ್ಲಿ ಇಂದು ಮಳೆಯ ಹಿನ್ನೆಲೆಯಲ್ಲಿ ಹಳದಿ ಅಲರ್ಟ್​ (Yellow Alert) ಘೋಷಿಸಲಾಗಿದೆ. ಮಲೆನಾಡು ಮತ್ತು ಕರಾವಳಿಯಲ್ಲಿ ಇಂದು ಹಳದಿ ಅಲರ್ಟ್​ (Yellow Alert) ಘೋಷಿಸಲಾಗಿದೆ. ಇಂದು ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಹಳದಿ ಅಲರ್ಟ್ ನೀಡಲಾಗಿದೆ. ಇಂದು ಕೊಡಗಿನಲ್ಲಿ (Kodagu Rain) ಮಳೆಯಿಂದ ರೆಡ್ ಅಲರ್ಟ್​ (Red Alert) ಘೋಷಿಸಲಾಗಿದೆ.

ಕಳೆದೊಂದು ವಾರದಲ್ಲಿ ಕರ್ನಾಟಕದ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಶೇ.500ರಷ್ಟು ಅಧಿಕ ಮಳೆಯಾಗಿ ದಾಖಲೆ ನಿರ್ಮಿಸಿದೆ. ರಾಜ್ಯಾದ್ಯಂತ ವ್ಯಾಪಕ ಮಳೆಯಾಗಿದ್ದು, ಕರಾವಳಿ ಮತ್ತು ಮಲೆನಾಡು ಹೊರತುಪಡಿಸಿದರೆ ಉಳಿದೆಡೆ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಉತ್ತರ ಕರ್ನಾಟಕದ ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದ ಮಳೆಯಾಗಿದ್ದು, ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿದಿದೆ. ಕರ್ನಾಟಕದಲ್ಲಿ ಇಂದಿನಿಂದ 2 ದಿನ ಗುಡುಗು ಮತ್ತು ಮಿಂಚು ಸಹಿತ ವ್ಯಾಪಕ ಮಳೆಯಾಗಲಿದೆ.

ಮುಂದಿನ 3 ದಿನಗಳವರೆಗೂ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅದರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಇಂದು ಮತ್ತು ನಾಳೆ ಹಳದಿ ಅಲರ್ಟ್ ಘೋಷಿಸಲಾಗಿದೆ.ಮಳೆಯಿಂದಾಗಿ ಜಲಾಶಯಗಳು ಭರ್ತಿಯಾಗಿ ಕಾವೇರಿ ನದಿ ಉಕ್ಕಿ ಹರಿಯುತ್ತಿದ್ದು, ಕೃಷ್ಣರಾಜ ಸಾಗರ (ಕೆಆರ್‌ಎಸ್) ಅಣೆಕಟ್ಟಿನಲ್ಲಿ ನೀರು ತೀವ್ರ ಮಟ್ಟಕ್ಕೆ ಏರಿದ್ದು, ಅಧಿಕಾರಿಗಳು ಸ್ವಲ್ಪಮಟ್ಟಿಗೆ ನೀರು ಬಿಡುವಂತೆ ಸೂಚಿಸಿದ್ದಾರೆ. ಇದರಿಂದಾಗಿ ಐತಿಹಾಸಿಕ ಶ್ರೀರಂಗಪಟ್ಟಣ ಪಟ್ಟಣದ ಕೆಲವು ಭಾಗಗಳು ಮತ್ತು ದೇವಾಲಯಗಳು ಜಲಾವೃತಗೊಂಡಿವೆ.

ಕರಾವಳಿ ಭಾಗದಲ್ಲಿ ಇನ್ನೂ 3 ದಿನ ಮಳೆಯ ಅಬ್ಬರ ಇರಲಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳಿಗೂ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ.

ಯಾವ ಜಿಲ್ಲೆಗಳಿಗೆ ಯಾವ ಅಲರ್ಟ್?: ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲ್ಬುರ್ಗಿ ವಿಜಯಪುರ ಜಿಲ್ಲೆಗಳಿಗೆ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ ಜಿಲ್ಲೆಗಳಿಗೆ ಕೂಡ ಹಳದಿ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಗ್ರಾಮಾಂತರ, ಹಾಸನ, ಮಂಡ್ಯ, ಮೈಸೂರು, ತುಮಕೂರು, ಚಾಮರಾಜನಗರ ಜಿಲ್ಲೆಗಳಿಗೆ ಹಳದಿ ಅಲರ್ಟ್ ನೀಡಲಾಗಿದೆ.

ಇಂದು ಯಾವ ರಾಜ್ಯಗಳಲ್ಲಿ ಮಳೆ?: ಇಂದು ಹಿಮಾಚಯ ಪ್ರದೇಶ ಮತ್ತು ಡೆಕನ್ ಪ್ರಸ್ಥಭೂಮಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಧ್ಯಪ್ರದೇಶ, ಕೊಂಕಣ, ಗೋವಾ, ಪೂರ್ವ ರಾಜಸ್ಥಾನ, ವಿದರ್ಭ, ಛತ್ತೀಸ್‌ಗಢ, ಒಡಿಶಾ ಮತ್ತು ತೆಲಂಗಾಣದ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಒಡಿಶಾ, ಜಾರ್ಖಂಡ್, ಮಧ್ಯಪ್ರದೇಶ, ಮಹಾರಾಷ್ಟ್ರ, ಛತ್ತೀಸ್‌ಗಢ, ತೆಲಂಗಾಣ, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ, ಸಿಕ್ಕಿಂ, ಪಶ್ಚಿಮ ಉತ್ತರ ಪ್ರದೇಶ, ಉತ್ತರಾಖಂಡ, ಪಶ್ಚಿಮ ಮಧ್ಯಪ್ರದೇಶ, ಗುಜರಾತ್, ಕರಾವಳಿ ಆಂಧ್ರ ಪ್ರದೇಶ ಮತ್ತು ಯಾನಂನಲ್ಲಿ ಗುಡುಗು ಸಹಿತ ಸಾಕಷ್ಟು ವ್ಯಾಪಕವಾದ ಬೀಳುವ ಸಾಧ್ಯತೆಯಿದೆ.ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಬಿಹಾರ, ಪೂರ್ವ ಉತ್ತರ ಪ್ರದೇಶ, ಹರಿಯಾಣ, ಚಂಡೀಗಢ, ದೆಹಲಿ, ಪಂಜಾಬ್, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಪಶ್ಚಿಮ ರಾಜಸ್ಥಾನ ಮತ್ತು ರಾಯಲಸೀಮಾದಲ್ಲಿ ಚದುರಿದಂತೆ ಮಳೆಯಾಗುವ ನಿರೀಕ್ಷೆಯಿದೆ. ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.

Scroll to Top