ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟದ ಆರೋಪಿಗೆ ಸಿಮ್ ನೀಡಿದಾತ ಒಡಿಶಾದಲ್ಲಿ ಅರೆಸ್ಟ್..!!!

ಮಂಗಳೂರಿನಲ್ಲಿ ಕಳೆದ ವರ್ಷ ಆಟೋ ರಿಕ್ಷಾದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿಗೆ ಮೊಬೈಲ್ ಸಿಮ್ ಪೂರೈಕೆ ಮಾಡಿದ್ದ ವ್ಯಕ್ತಿಯನ್ನು ಒಡಿಶಾ ವಿಶೇಷ ಕಾರ್ಯಪಡೆ ಬಂಧಿಸಿದೆ.

ಪಾಕಿಸ್ತಾನ ಗುಪ್ತಚರ ಸಂಸ್ಥೆ ಜೊತೆ ಸಂಪರ್ಕ ಹೊಂದಿದ್ದ ವ್ಯಕ್ತಿಗಳ ಪತ್ತೆಗೆ ವಿಶೇಷ ಕಾರ್ಯಪಡೆ ತಂಡಕ್ಕೆ ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಮೊಹಮ್ಮದ್ ಶಾರಿಕ್ ಜತೆ ಸಂಪರ್ಕ ಹೊಂದಿದ್ದ ವ್ಯಕ್ತಿ ಸಿಕ್ಕಿ ಬಿದ್ದಿದ್ದಾನೆ.

ಜಾಜ್‌ಪುರ ಜಿಲ್ಲೆಯ ಪ್ರೀತಂಕಾ‌ರ್ (31) ಬಂಧಿತ ಆರೋಪಿಯಾಗಿದ್ದು, ತನಿಖೆ ವೇಳೆ 2022ರ ನವೆಂಬರ್‌ನಲ್ಲಿ ನಡೆದಿದ್ದ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಲಿಂಕ್ ಇರುವುದು ಪತ್ತೆಯಾಗಿದೆ.

ಈ ಸಂಬಂಧ ಕರ್ನಾಟಕ ಪೊಲೀಸ್‌ ಹಾಗೂ ರಾಷ್ಟ್ರೀಯ ತನಿಖಾ ದಳಕ್ಕೆ ಮಾಹಿತಿ ನೀಡಲಾಗಿದೆ ಎಂದು ಒಡಿಶಾ ಪೊಲೀಸರು ತಿಳಿಸಿದ್ದಾರೆ.

You cannot copy content from Baravanige News

Scroll to Top