ಮಹಿಳೆಯರಿಗೆ ಉಚಿತ ಪ್ರಯಾಣ ದ.ಕ, ಉಡುಪಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ತುಂಬಿದ ಮಹಿಳಾ ಪ್ರಯಾಣಿಕರು

ಮಂಗಳೂರು/ ಉಡುಪಿ : ಮಹಿಳೆಯರಿಗಾಗಿ ಶಕ್ತಿ ಯೋಜನೆಯಡಿ ಉಚಿತ ಬಸ್ ಪ್ರಯಾಣಕ್ಕೆ ಭಾನುವಾರ ಚಾಲನೆ ನೀಡಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಹತ್ತಲು ಮಹಿಳಾ ಪ್ರಯಾಣಿಕರು ಮುಗಿಬಿದ್ದರು.

ನಗರದಿಂದ ಹೊರವಲಯಕ್ಕೆ ತೆರಳುವ ಬಸ್‌ಗಳಲ್ಲಿ ಬೆಳಗ್ಗೆ ಹಾಗೂ ಸಂಜೆ ವಿದ್ಯಾರ್ಥಿನಿಯರು ಮತ್ತು ಉದ್ಯೋಗಸ್ಥ ಮಹಿಳೆಯರಿಂದ ತುಂಬಿದ್ದರು.

ಸ್ಟೇಟ್‌ಬ್ಯಾಂಕ್‌ನಿಂದ ಪುತ್ತೂರಿಗೆ ತೆರಳುವ ಬಹುತೇಕ ಕೆಎಸ್‌ಆರ್‌ಟಿಸಿ ಬಸ್‌ಗಳು ಸಂಜೆ ಜ್ಯೋತಿ ಸಿನಿಮಾ ಥಿಯೇಟರ್‌ನಲ್ಲಿ ತಲುಪುವಷ್ಟರಲ್ಲಿ ಭರ್ತಿಯಾಗಿದ್ದವು.

ಉಡುಪಿಯಲ್ಲೂ ಮೂಡುಬಿದಿರೆ, ಕಾರ್ಕಳ, ಕುಂದಾಪುರ ಭಾಗದಲ್ಲಿ ಬಸ್‌ ಹತ್ತಲಾಗದೆ ಹಲವು ಮಹಿಳೆಯರು ಬಸ್‌ಗಾಗಿ ಕಾಯುತ್ತಿದ್ದ ದೃಶ್ಯ ಕಂಡು ಬಂತು.

ಇನ್ನು ಉಡುಪಿ ಡಿಪೋದಲ್ಲಿ ಭಾನುವಾರ ಮಧ್ಯಾಹ್ನದಿಂದ ರಾತ್ರಿ 10ರವರೆಗೆ 940 ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ.

ಸಾಮಾನ್ಯವಾಗಿ ಖಾಸಗಿ ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯರು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಸಲು ಆರಂಭಿಸಿದ್ದಾರೆ.

You cannot copy content from Baravanige News

Scroll to Top