ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ : ಸಿಬಿಐ ವಿಶೇಷ ಕೋರ್ಟ್ ನಿಂದ ಇಂದು ಅಂತಿಮ ತೀರ್ಪು ಪ್ರಕಟ

ಮಂಗಳೂರು : ದೇಶಾದ್ಯಾಂತ ಸುದ್ದಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ (17) ಎಂಬವಳ ಅತ್ಯಾಚಾರ ನಡೆಸಿ ನಂತರ ಕೊಲೆ ಮಾಡಿದ್ದ ಪ್ರಕರಣದ ತೀರ್ಪು 11 ವರ್ಷಗಳ ಬಳಿಕ ಬೆಂಗಳೂರು ಸಿಬಿಐ ವಿಶೇಷ ಕೋರ್ಟ್ ನಿಂದ ಇಂದು ಪ್ರಕಟವಾಗಲಿದೆ.

ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ ಚಂದಪ್ಪ ಗೌಡ ಮತ್ತು ಕುಸುಮಾವತಿ ದಂಪತಿ ಪುತ್ರಿ ಸೌಜನ್ಯ ಕೊಲೆ ಪ್ರಕರಣದ ತೀರ್ಪು ಅನ್ನು ಸಿಬಿಐ ವಿಶೇಷ ನ್ಯಾಯಾಲಯ ಪ್ರಕಟಿಸಲಿದೆ.

ಉಜಿರೆಯ ಎಸ್‌ಡಿಎಂ ಕಾಲೇಜು ವಿದ್ಯಾರ್ಥಿನಿಯಾಗಿದ್ದ ಸೌಜನ್ಯ ಅವರು 2012ರ ಅಕ್ಟೋಬರ್ 9ರಂದು ಸಂಜೆ ಕಾಲೇಜಿನಿಂದ ಮನೆಗೆ ಹೋಗುವಾಗ ನಾಪತ್ತೆಯಾಗಿದ್ದರು. ಮರು ದಿನ ರಾತ್ರಿ ಧರ್ಮಸ್ಥಳದ ಮಣ್ಣಸಂಕ ಬಳಿ ವಿದ್ಯಾರ್ಥಿನಿಯ ಶವ ಪತ್ತೆಯಾಗಿತ್ತು.

ಬಳಿಕ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಾಖಲಾಗಿತ್ತು.

ಶಂಕಿತ ಆರೋಪಿ, ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ನಿವಾಸಿ ಸಂತೋಷ್ ರಾವ್ ಧರ್ಮಸ್ಥಳದ ಬಾಹುಬಲಿ ಬೆಟ್ಟದ ಬಳಿ ಸಾರ್ವಜನಿಕರ ಕೈಗೆ ಸಿಕ್ಕಿದ್ದು, ಬಳಿಕ ಆತನನ್ನು ಪೊಲೀಸರ ವಶಕ್ಕೆ ಒಪ್ಪಿಸಲಾಗಿತ್ತು.

ಪೊಲೀಸರು ಆತನನ್ನು ಬಂಧಿಸಿ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿತ್ತು. ಸಂತೋಷ್ ರಾವ್‌ ಸುಮಾರು ಆರು ಬಾರಿ ಸಿಬಿಐ ನ್ಯಾಯಾಲಯಕ್ಕೆ ಹಾಜರಾಗದೆ, ತಲೆ ಮರೆಸಿಕೊಂಡಿದ್ದ.

ಪ್ರಕರಣ ನಡೆದು 11 ವರ್ಷಗಳ ಬಳಿಕ ಇಂದು ಈ ಪ್ರಕರಣದ ತೀರ್ಪು ಪ್ರಕಟವಾಗಲಿದೆ. ಹೀಗಾಗಿ ಈ ಪ್ರಕರಣದ ತೀರ್ಪಿನ ಕುರಿತು ಜನತೆಯ ಕುತೂಹಲ ಕೂಡ ಹೆಚ್ಚಾಗಿದೆ.

You cannot copy content from Baravanige News

Scroll to Top