ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ : ಸಂತೋಷ್ ರಾವ್ ಪ್ರಕರಣದಿಂದ ದೋಷಮುಕ್ತ

ಬೆಳ್ತಂಗಡಿ : ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಉಜಿರೆ ಕಾಲೇಜ್ ವಿದ್ಯಾರ್ಥಿನಿ ಧರ್ಮಸ್ಥಳ ಪಂಗಾಳ ನಿವಾಸಿ ಸೌಜನ್ಯ (17) ಅತ್ಯಾಚಾರ ನಡೆಸಿ ನಂತರ ಕೊಲೆ ಮಾಡಿದ್ದ ಪ್ರಕರಣ 11 ವರ್ಷಗಳ ಬಳಿಕ ಬೆಂಗಳೂರು ಸಿಬಿಐ ವಿಶೇಷ ಕೋರ್ಟ್ ನಿಂದ ಜೂನ್ 16 ರಂದು(ಇಂದು) ತೀರ್ಪು ಪ್ರಕಟವಾಗಿದೆ. ಪ್ರಕರಣದಲ್ಲಿ ಆರೋಪಿಯಾಗಿದ್ದ ಸಂತೋಷ್ ರಾವ್ ಪ್ರಕರಣದ ದೋಷಮುಕ್ತ ಎಂದು ಸಿಬಿಐ ನ್ಯಾಯಧೀಶ ಸಂತೋಷ್ ಸಿ.ಬಿ ಆದೇಶ ಮಾಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಚಂದಪ್ಪ ಗೌಡ ಮತ್ತು ಕುಸುಮಾವತಿ ದಂಪತಿಗಳ ಎರಡನೇ ಮಗಳು ಸೌಜನ್ಯ (17) ಕಾಲೇಜ್ ಮುಗಿಸಿ ಮನೆಗೆ ವಾಪಸ್ ಹೋಗುವಾಗ 9-10-2012 ರಂದು ಸಂಜೆ 4:15 ಕ್ಕೆ ನಾಪತ್ತೆಯಾಗಿದ್ದು ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.

10-10-2012 ರಂದು ರಾತ್ರಿ 10:30 ಕ್ಕೆ ಧರ್ಮಸ್ಥಳ ಮಣ್ಣಸಂಖದಲ್ಲಿ ಶವ ಪತ್ತೆಯಾಗಿತ್ತು. ಬಳಿಕ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ರೇಪ್ & ಮಾರ್ಡರ್ ಅಗಿ ಪ್ರಕರಣ ದಾಖಲಾಗಿತ್ತು. 11-10-2012 ರಂದು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಹೌಸಿಂಗ್ ಕಾಲೋನಿಯ ಸಂತೋಷ್ ರಾವ್ (38) ಬಾಹುಬಳಿ ಬೆಟ್ಟದ ಗುಡ್ಡದಲ್ಲಿ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದು ಪೊಲೀಸರಿಂದ ಬಂಧಿಸಲಾಗಿತ್ತು. ಈ ಬಗ್ಗೆ ರಾಜ್ಯ ಸರಕಾರ ಸಿಐಡಿ ತನಿಖೆಗೆ ನೀಡಿತ್ತು. ನಂತರದ ದಿನಗಳಲ್ಲಿ ಪ್ರತಿಭಟನೆ ಕೂಗು ಹೆಚ್ಚಾದ ಕಾರಣದಿಂದ ರಾಜ್ಯ ಸರಕಾರ ಮತ್ತೆ ಕೇಂದ್ರ ಸಿಬಿಐ ತನಿಖೆ ನಡೆಸಲು ಆದೇಶ ಮಾಡಿತ್ತು. ಆರೋಪಿ ನ್ಯಾಯಾಲಯದಿಂದ ಜಾಮೀನು ಪಡೆದು ಹೊರಬಂದಿದ್ದ. ಆರೋಪಿ ಸಂತೋಷ್ ರಾವ್ ಬೆಂಗಳೂರು ಸಿಬಿಐ ಕೋರ್ಟ್ ಗೆ ಕಳೆದ ಆರು ಭಾರಿಗೂ ಹೆಚ್ಚು ಹಾಜರಾಗದೆ ತಲೆಮರೆಸಿಕೊಂಡಿದ್ದ. ಇದಾದ ಬಳಿಕ ಕೋರ್ಟ್ ಜೂನ್.16 ರಂದು ಖದ್ದು ಹಾಜರಾಗಲು ಸಮನ್ಸ್ ನೀಡಿತ್ತು.ಅದರಂತೆ ನ್ಯಾಯಾಲಯಕ್ಕೆ ಹಾಜರಾಗಿದ್ದು, ಇದೀಗ ಆರೋಪಿ ಸಂತೋಷ್ ರಾವ್ ದೋಷಮುಕ್ತನಾಗಿದ್ದಾನೆ.

You cannot copy content from Baravanige News

Scroll to Top