ಕರಾವಳಿಯಲ್ಲಿ ಕೋಮುದ್ವೇಷಕ್ಕೆ ಬಲಿಯಾದ 4 ಕುಟುಂಬಗಳಿಗೆ 25 ಲಕ್ಷ ರೂ. ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ವೈಷಮ್ಯಕ್ಕೆ ಬಲಿಯಾದ ಬೆಳ್ಳಾರೆಯ ಮಸೂದ್, ಮಂಗಳಪೇಟೆಯ ಮುಹಮ್ಮದ್ ಫಾಝಿಲ್, ಕಾಟಿಪಳ್ಳದ ಅಬ್ದುಲ್ ಜಲೀಲ್ ಹಾಗೂ ಕಾಟಿಪಳ್ಳದ ದೀಪಕ್ ರಾವ್ ಕುಟುಂಬಗಳಿಗೆ ಮುಖ್ಯಮಂತ್ರಿಯ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ದುಷ್ಕರ್ಮಿಗಳಿಂದ ಕೊಲೆಯಾದ ನಾಲ್ಕು ಮಂದಿಯ ಕುಟುಂಬಗಳಿಗೆ ಮುಖ್ಯಮಂತ್ರಿಯ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿ ರಾಜ್ಯ ಸರಕಾರ ಆದೇಶಿಸಿದೆ.

ಕಳೆದ ವರ್ಷದ ಜುಲೈ 19ರಂದು ಬೆಳ್ಳಾರೆಯ ಮಸೂದ್, 28ರಂದು ಮಂಗಳಪೇಟೆಯ ಮುಹಮ್ಮದ್ ಫಾಝಿಲ್, ಕಳೆದ ವರ್ಷದ ಡಿಸೆಂಬರ್ 24ರಂದು ಕಾಟಿಪಳ್ಳದ ಅಬ್ದುಲ್ ಜಲೀಲ್ ಹಾಗೂ 2018ರ ಜನವರಿ 3ರಂದು ಕಾಟಿಪಳ್ಳದ ದೀಪಕ್ ರಾವ್ ರನ್ನು ದುಷ್ಕರ್ಮಿಗಳು ಕೊಲೆಗೈದಿದ್ದರು ಎಂದು ಪ್ರಕರಣ ದಾಖಲಾಗಿತ್ತು. ರಾಜ್ಯ ಪೊಲೀಸ್ ಇಲಾಖೆಯ ಮಹಾನಿರ್ದೇಶಕರು ಸರಕಾರದ ವತಿಯಿಂದ ಪರಿಹಾರ ಧನ ಮಂಜೂರು ಮಾಡುವಂತೆ ಒಳಾಡಳಿತ ಇಲಾಖೆಯನ್ನು ಕೋರಿದ ಮೇರೆಗೆ ಈ ಪರಿಹಾರ ಘೋಷಿಸಲಾಗಿದ್ದು, ಜೂ.19ರಂದು ಪರಿಹಾರದ ಧನದ ಚೆಕ್ ಪಡೆಯುವಂತೆ ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ.

You cannot copy content from Baravanige News

Scroll to Top