ನಾಳೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಿಂದ ಪ್ರತಿಭಟನೆ

ಬೆಂಗಳೂರು: ಅಕ್ಕಿ ಖರೀದಿ ಬಗ್ಗೆ ಕರ್ನಾಟಕ ಹಾಗೂ ಕೇಂದ್ರ ಸರ್ಕಾರದ ನಡುವಿನ ಜಟಾಪಟಿ ಜೋರಾಗಿದ್ದು, ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ.

ಜೂನ್ 20ರಂದು ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮಾಡುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕರೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಮೊದಲು ಅಕ್ಕಿ ಕೊಡುತ್ತೇವೆಂದಿದ್ದ FCI ನಂತರ ಸಾಧ್ಯವಿಲ್ಲವೆಂದು ಪತ್ರ ಬರೆದಿದೆ. ಇದರೊಂದಿಗೆ ಕೇಂದ್ರ ಸರ್ಕಾರದ ದ್ವೇಷದ ರಾಜಕಾರಣಕ್ಕೆ ಇದು ಉದಾಹರಣೆಯಾಗಿದೆ. ಭಾರತೀಯ ಜನತಾ ಪಕ್ಷ ಬಡವರ ಹೊಟ್ಟೆ ಮೇಲೆ ಹೊಡೆದಿದೆ. ಬಿಜೆಪಿ ಬಡವರಿಗೆ ದ್ರೋಹ ಮಾಡುವ ಪಾರ್ಟಿ. ಭಾರತೀಯ ಜನತಾ ಪಕ್ಷದ ನಿರ್ಧಾರಕ್ಕೆ ನಾವು ಧಿಕ್ಕಾರ ಹೇಳಬೇಕು. ಹೀಗಾಗಿ ಕೇಂದ್ರ ಸರ್ಕಾರ, ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು.

20) ಜಿಲ್ಲಾ ಕೇಂದ್ರದಲ್ಲಿ ಬಿಜೆಪಿ ಹಾಘೂ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತೇವೆ. ಆಯಾ ಜಿಲ್ಲೆಯ ಶಾಸಕರು, ಕಾರ್ಯಕರ್ತರು ಭಾಗವಹಿಸಬೇಕು. ಕೆಪಿಸಿಸಿಯಿಂದ ನಾವು ಸೂಚನೆ ಕೊಡುತ್ತೇವೆ. ನಮ್ಮನ್ನು ಕೇಂದ್ರ ಸರ್ಕಾರ ಹೆದರಿಸುತ್ತಿದೆ. ಬಡವರ ಹೊಟ್ಟೆ ಮೇಲೆ ‌ಹೊಡೆಯುತ್ತಿದ್ದಾರೆ. ನಾವು ಇದರ ವಿರುದ್ಧ ಸಿಡಿಯುತ್ತೇವೆ. ಪ್ರತಿಭಟನೆ ಕೇಂದ್ರ ಸರ್ಕಾರ ಹಾಗೂ ಜನರ ಗಮನ ಸೆಳೆಯಬೇಕು ಎಂದು ಕಾರ್ಯಕರ್ಯರಿಗೆ ಹಾಗೂ ಮುಖಂಡರಿಗೆ ಕರೆ ನೀಡಿದರು.

Scroll to Top