ಬೆಚ್ಚ ಬೆಚ್ಚ ನ್ಯೂಸ್
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು!
ಪುತ್ತೂರು : ಮುಸ್ಲಿಂ ಯುವತಿಗೆ ಚೂರಿ ಇರಿದ ಹಿಂದೂ ಯುವಕ : ಆಸ್ಪತ್ರೆಗೆ ದಾಖಲು!
ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ : ಕೊಲೆಯಲ್ಲಿ ಗಲಾಟೆ ಅಂತ್ಯ
ಶಿರ್ವ: ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಂಸ್ಥಾಪಕ ಗೇಬ್ರಿಯಲ್ ನಜರೆತ್ ನಿಧನ
ಅಧಿಕ ಲಾಭಾಂಶ ಆಮಿಷ ; ಹಿರಿಯ ನಾಗರಿಕರಿಗೆ ಲಕ್ಷಾಂತರ ರೂ.ವಂಚನೆ
ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ಮೆರವಣಿಗೆ, ಮುಷ್ಕರ
ಸೂಡ ಶ್ರೀ ಸುಬ್ರಹ್ಮಣ್ಯ ಕುಣಿತ ಭಜನಾ ಮಂಡಳಿ ಉದ್ಘಾಟನಾ ಸಮಾರಂಭ
ತಂದೆಯನ್ನು ಆಸ್ಪತ್ರೆಗೆ ಸೇರಿಸಿ ಕಾರಿನಲ್ಲಿ ಎಸಿ ಹಾಕಿ ಮಲಗಿದ್ದ ಮಗ ಸಾವು
ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ
ಮುಳುವಾದ ಸೌಂದರ್ಯ… ಪತ್ನಿ ನೋಡಲು ಸುಂದರವಾಗಿದ್ದಾಳೆಂದು ಆಕೆಯ ಕಥೆಯನ್ನೇ ಮುಗಿಸಿದ ಪತಿರಾಯ
Next
Prev

ಅಪ್ಪನ ಕೈಯಿಂದಲೇ ಅಧಿಕಾರಿ ಸ್ವೀಕರಿಸಿದ ಮಗಳು ; ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಭಾವನಾತ್ಮಕ ಘಟನೆ

ಮಂಡ್ಯ: ತಂದೆ ಪಿಎಸ್ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಪೊಲೀಸ್ ಠಾಣೆಗೆ ಮಗಳು ಪಿಎಸ್ಐ ಆಗಿ ಬಂದು ತಂದೆಯಿಂದಲೇ ಅಧಿಕಾರ ಸ್ವೀಕರಿಸಿದ ವಿಶೇಷತೆ ಜಿಲ್ಲೆಯ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಮಂಡ್ಯದ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಆಗಿದ್ದ ವೆಂಕಟೇಶ್ ಅವರ ಜಾಗಕ್ಕೆ ಮಗಳು ಬಿ.ವಿ ವರ್ಷ ಪಿಎಸ್ಐ ಆಗಿ ನೇಮಕಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಪುತ್ರಿ ತನ್ನ ತಂದೆಯಿಂದಲೇ ಬ್ಯಾಟನ್ ಪಡೆಯುವುದರ ಮೂಲಕ ಅಧಿಕಾರ ಸ್ವೀಕರಿಸಿದರು. ಬಳಿಕ ತಂದೆ ಹೂಗುಚ್ಛ ನೀಡಿ ಮಗಳಿಗೆ ಅಭಿನಂದಿಸಿದರು. ಇದರಿಂದ ವರ್ಷ ಫುಲ್ ಖುಷ್ ಆಗಿದ್ದಾರೆ.

ವೆಂಕಟೇಶ್ ಅವರು ಕಳೆದ 16 ವರ್ಷ ಭಾರತೀಯ ಸೇನೆಗೆ ಸೇವೆ ಸಲ್ಲಿಸಿದ್ದರು. ಬಳಿಕ ಸೇನೆಯಿಂದ ನಿವೃತ್ತಿ ಪಡೆದ ಬಳಿಕ 2010ರಲ್ಲಿ ಪಿಎಸ್ಐ ಹುದ್ದೆಗೆ ಪರೀಕ್ಷೆ ಬರೆದಿದ್ದರು. ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಸೇನಾ ಕೋಟಾದಡಿ ಪೊಲೀಸ್ ಇಲಾಖೆಗೆ ನೇಮಕಗೊಂಡಿದ್ದರು. ಕಳೆದ ವರ್ಷದಿಂದ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ಕಾರ್ಯ ನಿರ್ವಹಿಸುತ್ತಿದ್ದರು.

ಮಗಳು ವರ್ಷ 2022 ರಲ್ಲಿ ಪಿಎಸ್ಐ ಪರೀಕ್ಷೆಯಲ್ಲಿ ಉತ್ತಿರ್ಣರಾಗಿದ್ದರು. ಹೀಗಾಗಿ ಕಳೆದ ಒಂದು ವರ್ಷದಿಂದ ಪ್ರೊಬೆಷನರಿ ಪಿಎಸ್ಐ ಆಗಿ ಕರ್ತವ್ಯಲ್ಲಿದ್ದರು. ಸದ್ಯ ತಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಮಗಳು ಹುದ್ದೆ ಸ್ವೀಕಾರ ಮಾಡಿದ್ದಾರೆ.

Related Posts

Scroll to Top