ಉಡುಪಿ : ಹೊಟ್ಟೆ ನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಸಾವು ; ಮಾಹಿತಿ ನೀಡದೆ ಆಪರೇಷನ್ ಮಾಡ್ತಂತೆ ಆಸ್ಪತ್ರೆ..!!!

ಉಡುಪಿ: ಹೊಟ್ಟೆ ನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕಾಪು ತಾಲೂಕಿನ ಪಡುಬಿದ್ರಿಯಲ್ಲಿ ನಡೆದಿದೆ.

ಕೆಮ್ಮುಂಡೇಲು ನಿವಾಸಿ ನಿಖಿತಾ (20) ಸಾವಿಗೀಡಾದ ಯುವತಿ.

ಕಳೆದ ಭಾನುವಾರ ಬೆಳಗ್ಗೆ ನಗರದ ಸಿಟಿ ಆಸ್ಪತ್ರೆಯಲ್ಲಿ ನಿಖಿತಾ ಸಾವನ್ನಪ್ಪಿದ್ದಾಳೆ. ಮಗಳ ಸಾವಿಗೆ ಆಸ್ಪತ್ರೆಯ ಬೇಜವಾಬ್ದಾರಿ ಕಾರಣ ಎಂದು ಆಕೆಯ ಪೋಷಕರು ಆರೋಪಿಸಿದ್ದಾರೆ.
ಹೊಟ್ಟೆ ನೋವು ಎಂಬ ಕಾರಣಕ್ಕೆ ಕಳೆದ ಬುಧವಾರ ಖಾಸಗಿ ಆಸ್ಪತ್ರೆಯಲ್ಲಿ ನಿಖಿತಾಳನ್ನು ದಾಖಲಿಸಲಾಗಿತ್ತು. ದಾಖಲಾದ ಬೆನ್ನಲ್ಲೇ ಸ್ಕ್ಯಾನಿಂಗ್ ಎಂಡೋಸ್ಕೋಪಿ ಸಿಟಿ ಸ್ಕ್ಯಾನ್ ಮಾಡಲಾಗಿತ್ತು. ಬಳಿಕ ಸರಿಯಾದ ಮಾಹಿತಿ ನೀಡದೇ ಮಗಳಿಗೆ ಆಪರೇಷನ್ ಮಾಡಿದ್ದಾರೆ. ಅಪೆಂಡಿಕ್ಸ್ ಆಗಿದೆ ಎಂದು ಆಪರೇಷನ್ ಮಾಡಿದ್ದಾರೆ ಎಂದು ನಿಖಿತಾ ಪೋಷಕರು ಆರೋಪಿಸಿದ್ದಾರೆ.

ಲಂಗ್ಸ್ನಲ್ಲಿ ನೀರು ತುಂಬಿ ಏರುಪೇರು

ಶಸ್ತ್ರಚಿಕಿತ್ಸೆ ನಡೆದ ಬಳಿಕ ಯುವತಿಯ ಆರೋಗ್ಯದಲ್ಲಿ ಏರುಪೇರು ಆಗಿದೆ. ಲಂಗ್ಸ್ನಲ್ಲಿ ನೀರು ತುಂಬಿದ ಪರಿಣಾಮ ಆರೋಗ್ಯದಲ್ಲಿ ಏರುಪೇರು ಆಗಿದೆ. ಆರೋಗ್ಯ ಸ್ಥಿತಿಯನ್ನು ಬಿಗುಡಾಯಿಸಿದ್ದನ್ನು ಗಮನಿಸಿದ ಪೋಷಕರು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ವರ್ಗಾಯಿಸುವಂತೆ ಒತ್ತಾಯ ಮಾಡಿದ್ದರಂತೆ. ಯಾವುದೇ ಗಂಭೀರ ಸಮಸ್ಯೆ ಇಲ್ಲ, ನಾವೇ ಚಿಕಿತ್ಸೆ ನೀಡುತ್ತೇವೆ ಎಂದು ಸಿಟಿ ಆಸ್ಪತ್ರೆ ವೈದ್ಯರು ಹೇಳಿದ್ದರು. ಇದ್ದಕ್ಕಿದ್ದಂತೆ ಶ್ವಾಸದಲ್ಲಿ ಏರುಪೇರು ಕಂಡುಬಂದು ಭಾನುವಾರ ಮುಂಜಾನೆ ಯುವತಿ ಸಾವನ್ನಪ್ಪಿದ್ದಾಳೆ ಎಂದು ಪೋಷಕರು ಆರೋಪಿಸಿದರು.


ಡಿಪ್ಲೋಮಾ ಓದುತ್ತಿದ್ದ ನಿಖಿತಾ

ಸಾವಿಗೆ ಹೃದಯಾಘಾತ ಕಾರಣ ಎಂದು ಆಸ್ಪತ್ರೆ ಹೇಳಿದೆ. ಮಣಿಪಾಲ ಆಸ್ಪತ್ರೆಗೆ ಶಿಫ್ಟ್ ಮಾಡಲು ಅವಕಾಶ ಕೊಡಲಿಲ್ಲ. ಪರಿಣಾಮ ನಮ್ಮ ಮಗಳು ಸಾವನ್ನಪ್ಪಿದ್ದಾಳೆ ಎಂದು ಪೋಷಕರು ಆರೋಪಿಸಿದ್ದಾರೆ. ನಿಖಿತಾ ಸಾವಿಗೆ ನ್ಯಾಯ ನೀಡುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಒತ್ತಾಯ ಕೇಳಿಬರುತ್ತಿದೆ.

ಪೋಷಕರು ಪೊಲೀಸರಿಗೆ ದೂರು ನೀಡಲು ಹಿಂದೇಟು ಹಾಕುತ್ತಿದ್ದಾರೆ. ಮಗಳೇ ಇಲ್ಲದ ಮೇಲೆ ದೂರು ನೀಡುವುದು ಯಾಕೆ ಎಂದು ಪೋಷಕರು ಹೇಳ್ತಿದ್ದಾರೆ. ಮಾತ್ರವಲ್ಲ, ಸಾವಿನ ನೋವಿನಲ್ಲಿ ಮರಣೋತ್ತರ ಪರೀಕ್ಷೆಗೂ ಕುಟುಂಬಸ್ಥರು ಒಪ್ಪಲಿಲ್ಲ. ಜನಾರ್ದನ ಶೋಭಾ ದಂಪತಿ ಏಕೈಕ ಮಗಳು ನಿಕಿತಾ. ಮಂಗಳೂರಿನ ಕೆಪಿಟಿಯಲ್ಲಿ ಡಿಪ್ಲೋಮೋ ಮಾಡುತ್ತಿದ್ದಳು.

You cannot copy content from Baravanige News

Scroll to Top