ವಿಧಾನಪರಿಷತ್ ಉಪ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿಗಳಾದ ಶೆಟ್ಟರ್, ಬೋಸರಾಜು, ತಿಪ್ಪಣ್ಣ ಅವಿರೋಧ ಆಯ್ಕೆ

ಬೆಂಗಳೂರು, ಜೂ 23: ವಿಧಾನಪರಿಷತ್ನ ತೆರವಾಗಿದ್ದ ಮೂರು ಸ್ಥಾನಗಳಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರ್, ಹಾಗೂ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಎನ್‌ಎಸ್ ಬೋಸರಾಜು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ವಿಧಾನಪರಿಷತ್ ಚುನಾವಣೆಗೆ ಸಲ್ಲಿಸಿದ್ದ ನಾಮಪತ್ರ ವಾಪಸ್ ಪಡೆಯಲು ಇಂದು ಕೊನೆಯ ದಿನವಾಗಿದ್ದು, ಕಣದಲ್ಲಿ ಮೂವರೇ ಇದ್ದ ಕಾರಣದಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಲಾಗಿದೆ.

ಇನ್ನು ವಿಧಾನಪರಿಷತ್ ತೆರವಾಗಿರುವ ಸ್ಥಾನಗಳಿಗೆ ಜೂನ್ 30ರಂದು ಉಪಚುನಾವಣೆ ನಿಗದಿಯಾಗಿತ್ತು. ಆದರೆ ಇಂದು ಅವಿರೋಧವಾಗಿ ಆಯ್ಕೆಯಾಗಿದ್ದರಿಂದ ಚುನಾವಣೆ ನಡೆಯುವುದಿಲ್ಲ.

Baravanige News

Translate »

You cannot copy content from Baravanige News

Scroll to Top