ಗೃಹಜ್ಯೋತಿ ಯೋಜನೆಗೆ 9 ದಿನದಲ್ಲಿ 61,70,044 ಗ್ರಾಹಕರು ನೋಂದಣಿ..!!!

ಬೆಂಗಳೂರು: ರಾಜ್ಯದಲ್ಲಿ ಗೃಹ ಜ್ಯೋತಿ ಯೋಜನೆಗೆ ಕಳೆದ 9 ದಿನಗಳಲ್ಲಿ 61,70,044 ಗ್ರಾಹಕರು ನೋಂದಣಿ ಮಾಡಿಕೊಂಡಿದ್ದಾರೆ.


ಜೂನ್ 26 ಸಂಜೆ 7 ಗಂಟೆಯ ವೇಳೆಗೆ ಬೆಸ್ಕಾಂ – 327307, ಸೆಸ್ಕ್ – 1,38,561, ಜೆಸ್ಕಾಂ – 72,002, ಹೆಸ್ಕಾಂ – 155506, ಹುಕ್ಕೇರಿ (HRECS) – 3,841, ಮೆಸ್ಕಾಂ – 104551 ಸೇರಿದಂತೆ ರಾಜ್ಯದ್ಯಂತ ಒಟ್ಟು 8,01,768 ಗ್ರಾಹಕರು ನೋಂದಾಯಿಸಿಕೊಂಡಿದ್ದಾರೆ.


ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿಲ್ಲದೆ ವಿದ್ಯುತ್ ಕಛೇರಿ, ನಾಡಕಛೇರಿ ಹಾಗೂ ಕಂಪ್ಯೂಟರ್, ಲ್ಯಾಪ್ಟಾಪ್, ಮೊಬೈಲ್ ಫೋನ್ ನಲ್ಲಿ ಅಧಿಕೃತ ಪೋರ್ಟಲ್ https://sevasindhugs.karnataka.gov.in ಮೂಲಕ ನೋಂದಾಯಿಸಬಹುದು. ಮೇಲ್ಕಂಡ ವೆಬ್ಸೈಟ್ ಹೊರತುಪಡಿಸಿ, ನೋಂದಣಿಗೆ ಯಾವುದೇ ಖಾಸಗಿ/ನಕಲಿ ವೆಬ್ಸೈಟ್ ಬಳಸದೇ ಇರುವುದು ಸೂಕ್ತ.

ಬೆಂಗಳೂರು ಒನ್, ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ನೋಂದಣಿಗೆ ನಿಗದಿತ ಸೇವಾ ಶುಲ್ಕವನ್ನಷ್ಟೇ ಪಾವತಿಸಿ ನೋಂದಾಯಿಸಿ ಕೊಳ್ಳಬಹುದು. ಹೆಚ್ಚುವರಿ ಹಣಕ್ಕೆ ಯಾರಾದರೂ ಬೇಡಿಕೆಯಿಟ್ಟಲ್ಲಿ, ಗ್ರಾಹಕರು ಕೂಡಲೇ 24×7 ಸಹಾಯವಾಣಿ 1912 ಕ್ಕೆ ಕರೆಮಾಡಿ ತಿಳಿಸಬಹುದು.

You cannot copy content from Baravanige News

Scroll to Top