ಪುತ್ತೂರು : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕೊಡಗು ಜಿಲ್ಲೆಯಲ್ಲಿರುವ ನಿಷೇಧಿತ ಪಿಎಫ್ಐ ಸಂಘಟನೆ ಕಾರ್ಯಕರ್ತರ ಮನೆಗಳ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇಂದು ಏಕಕಾಲಕ್ಕೆ 6 ಕಡೆಗಳಲ್ಲಿ ದಾಳಿ ನಡೆಸಿರುವ ಎನ್ಐಎ ಅಧಿಕಾರಿಗಳು, ಎಲೆಕ್ಟ್ರಾನಿಕ್ ಡಿವೈಸ್ಗಳು ಸೇರಿದಂತೆ ಮಹತ್ವದ ದಾಖಲೆಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ನಿಷೇಧಿತ ಸಂಘಟನೆ ಪಿಎಫ್ಐನಲ್ಲಿ ಭಾಗಿಯಾಗಿದ್ದ ಕಾರ್ಯಕರ್ತರನ್ನು ವಿಚಾರಣೆ ನಡೆಸಲಾಗುತ್ತಿದ್ದು, ಸೋಮವಾರಪೇಟೆಯಲ್ಲಿ ಹಲವು ಕಾರ್ಯಕರ್ತರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ದಕ್ಷಿಣ ಕನ್ನಡ, ಕೊಡಗು ಜಿಲ್ಲೆಯಲ್ಲಿ ಎನ್ಐಎ ದಾಳಿ
