ಜುಲೈ 1ರಿಂದ ಉಚಿತ ವಿದ್ಯುತ್ ವಿತರಣೆ; ಸಚಿವ ಜಾರ್ಜ್

ಬೆಂಗಳೂರು, ಜೂ 28: ರಾಜ್ಯದಲ್ಲಿ ಉಚಿತ ವಿದ್ಯುತ್ ವಿತರಣೆ ಗ್ಯಾರಂಟಿ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು, ಜುಲೈ 1ರಿಂದಲೇ ಉಚಿತ ವಿದ್ಯುತ್ ವಿತರಣೆ ಮಾಡಲಾಗುವುದೆಂದು ಭರವಸೆ ನೀಡಿದ್ದಾರೆ.

ಜುಲೈ 1ರಿಂದಲೇ ಉಚಿತ ವಿದ್ಯುತ್ ವಿತರಣೆ ಮಾಡಲಾಗುವುದು. ಈಗಾಗಲೇ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಅರ್ಜಿ ಸಲ್ಲಿಸಲು ಇರುವ ನಿಯಮಗಳ ಪ್ರಕಾರವೇ ಅರ್ಜಿ ಸಲ್ಲಿಸಲು ಅವಕಾಶವಿದ್ದು, ನಿಯಮ ಮೀರಿದ್ದಲ್ಲಿ ಕ್ರಮಕೈಗೊಳ್ಳಲಾಗುವುದೆಂದು ಅವರು ತಿಳಿಸಿದ್ದಾರೆ.

ಜುಲೈ 1ರಿಂದ ಯೋಜನೆ ಜಾರಿಗೆ ಬರಲಿದ್ದು, ಆಗಸ್ಟ್ ತಿಂಗಳಲ್ಲಿ ಮೊದಲ ಉಚಿತ ಬಿಲ್ ಬರಲಿದೆ. ನಿಯಮಗಳ ಪ್ರಕಾರ ಇನ್ನೂರು ಯುನಿಟ್ ವಿದ್ಯುತ್ ಒಳಗೆ ಬಳಸಿದ್ದಲ್ಲಿ ಸಂಪೂರ್ಣ ಉಚಿತ ಇರಲಿದೆ ಎಂದು ಅವರು ತಿಳಿಸಿದ್ದಾರೆ.

Baravanige News

Translate »

You cannot copy content from Baravanige News

Scroll to Top