ಪ್ರವೀಣ್‌ ಹತ್ಯೆ ಆರೋಪಿಗಳಿಗೆ ಎನ್‌ಐಎ ಗಡುವು : ಜೂ.30ರೊಳಗೆ ಶರಣಾಗದಿದ್ದರೆ ಮನೆ ಜಪ್ತಿ

ಪುತ್ತೂರು : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಜೂ.30 ರೊಳಗೆ ಶರಣಾಗದೇ ಇದ್ದಲ್ಲಿ ಅವರ ಮನೆಯನ್ನು ಜಪ್ತಿ ಮಾಡಲಾಗುವುದೆಂದು ಸುಳ್ಯ ನಗರದಲ್ಲಿ ಧ್ವನಿವರ್ಧಕದ ಮೂಲಕ ಉದ್ಘೋಷಣೆಯನ್ನು ಎನ್‌ಐಎ ನ್ಯಾಯಾಲಯದ ಅಧಿಕಾರಿಗಳು ಹಾಗೂ ಸುಳ್ಯ ಪೊಲೀಸ್ ಸಿಬ್ಬಂದಿಯವರು ಮಾಡುತ್ತಿದ್ದಾರೆ.

ಆರೋಪಿಗಳ ಸುಳಿವು ಕೊಟ್ಟಲ್ಲಿ ನಗದು ಬಹುಮಾನವನ್ನು ನೀಡಲಾಗುವುದು ಎಂದು ಸಾರ್ವಜನಿಕರಲ್ಲಿ ವಿನಂತಿಸಲಾಗುತ್ತಿದೆ.

ಸುಳ್ಯದ ಕಲ್ಲುಮುಟ್ಟುನಲ್ಲಿ ವಾಸವಿದ್ದ ಆರೋಪಿ ಉಮ್ಮರ್ ಫಾರೂಕ್ ಮನೆಗೂ ಹೋಗಿ ನ್ಯಾಯಾಲಯದ ಆದೇಶ ಪ್ರತಿಯನ್ನು ಅಂಟಿಸಿ ಬಂದಿದ್ದಾರೆ.

ನಿನ್ನೆ ಬೆಳ್ಳಾರೆಯಲ್ಲಿಯೂ ಧ್ವನಿವರ್ಧಕದ ಮೂಲಕ ಎನ್‌ಐಎ ನ್ಯಾಯಾಲಯದ ಆದೇಶವನ್ನು ಉದ್ಘೋಷಣೆ ಮಾಡಿ ಆರೋಪಿ ಮುಸ್ತಫಾ ಮನೆಗೂ ಹೋಗಿ ಆದೇಶ ಪ್ರತಿ ಅಂಟಿಸಿ ಬಂದಿದ್ದಾರೆಂದು ವರದಿಯಾಗಿದೆ.

You cannot copy content from Baravanige News

Scroll to Top