ಉಡುಪಿ : ಜಿಲ್ಲೆಯಾದ್ಯಂತ ಸೋಮವಾರದಿಂದ ವ್ಯಾಪಕವಾಗಿ ಭಾರೀ ಮಳೆ ಸುರಿತಾ ಇದ್ದು, ಈ ನಿಟ್ಟಿನಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಮಳೆಯಿಂದಾಗಿ ಜಿಲ್ಲೆಯ ಮಣಿಪಾಲದಲ್ಲಿ ರಸ್ತೆ ಬದಿಯಲ್ಲಿ ಗುಡ್ಡ ಕುಸಿತ ಉಂಟಾಗಿದೆ.
ನಿರಂತರ ಮಳೆಯಿಂದ ಮಣ್ಣು ಹದಗೊಂಡು ಗುಡ್ಡ ಜರಿಯುತ್ತಿದೆ ಅನ್ನುವ ಮಾಹಿತಿಯನ್ನು ಸ್ಥಳೀಯರು ನೀಡಿದ್ದಾರೆ.
ಸದ್ಯ ಸಣ್ಣ ಪ್ರಮಾಣದಲ್ಲಿ ಗುಡ್ಡ ಜರಿದಿದ್ದು, ಮಳೆ ಹೀಗೆ ಮುಂದುವರಿದರೆ ರಸ್ತೆ ಸಂಚಾರ ಹಾಗೂ ಗುಡ್ಡದ ಮೇಲೆ ಇರುವ ಕಟ್ಟಡಗಳಿಗೆ ಹಾನಿಯಾಗುವ ಆತಂಕವನ್ನು ಸ್ಥಳೀಯ ನಿವಾಸಿಗಳು ವ್ಯಕ್ತಪಡಿಸಿದ್ದಾರೆ.
ಇನ್ನು ಜಿಲ್ಲೆಯ ಕಾರ್ಕಳ, ಕಾಪು, ಕುಂದಾಪುರ ಬೈಂದೂರು ಭಾಗಗಳಲ್ಲೂ ಭಾರೀ ಮಳೆಯಾಗುತ್ತಿರುವ ಕುರಿತು ಮಾಹಿತಿ ಲಭ್ಯವಾಗಿದೆ.
ಬೆಳಗ್ಗಿನಿಂದ ಮೋಡ ಕವಿದ ವಾತಾವರಣವಿದ್ದು ಮೀನುಗಾರು ಸಮುದ್ರಕ್ಕೆ ಇಳಿಯದಂತೆ ಮಾಹಿತಿಯನ್ನು ರವಾನೆ ಮಾಡಲಾಗಿದೆ.
ನದಿ, ಸಮುದ್ರ ತೀರದ ನಿವಾಸಿಗಳು ಎಚ್ಚರಿಕೆ ಇರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.