ಮಂಗಳೂರು, ಜು.5: ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮುಂಗಾರು ಮಳೆಯ ಆರ್ಭಟ ಬುಧವಾರ ಕೂಡ ಮುಂದುವರಿದಿದ್ದು, ಮುಂಜಾಗೃತ ಕ್ರಮವಾಗಿ ಜುಲೈ 6 (ಗುರುವಾರ) ರಂದು ಮಂಗಳೂರು ಜಿಲ್ಲೆಯ ಪ್ರಾಥಮಿಕ, ಫ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗಳಿಗೆ ರಜೆ ಘೋಷಿಸಿ ಮಂಗಳೂರು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಆದೇಶಿಸಿದ್ದಾರೆ.