ಮಾಜಿ ಸಚಿವ ವಿನಯ್ ಕುಮಾರ್ ಸೊರಕೆರವರಿಗೆ ಮಾತೃ ವಿಯೋಗ

ಕಾಪು, ಜು.08: ಕರ್ನಾಟಕ ಸರ್ಕಾರದ ಮಾಜಿ ಸಚಿವರು ಹಾಗೂ ಮಾಜಿ ಸಂಸದರು ಆದಂತಹ ಶ್ರೀ ವಿನಯ್ ಕುಮಾರ್ ಸೊರಕೆ ರವರ ತಾಯಿ ಶ್ರೀಮತಿ ಸುನೀತಿ ಅಚ್ಯುತ ಸೊರಕೆ (91) ರವರು ಅಲ್ಪಕಾಲದ ಅಸೌಖ್ಯದಿಂದ ನಿಧನಹೊಂದಿದ್ದಾರೆ.

ಇವರು ಮೂರು ಜನ ಪುತ್ರರು,ಎರಡು ಜನ ಪುತ್ರಿಯರು, ಎಂಟು ಮೊಮ್ಮಕ್ಕಳು,ಹಾಗೂ ಮೂರು ಮರಿ ಮಕ್ಕಳನ್ನು ಅಗಲಿದ್ದಾರೆ.

ಇವರ ಅಂತ್ಯ ಸಂಸ್ಕಾರವನ್ನು ಇಂದು ಮಧ್ಯಾಹ್ನ 1.30 ರ ನಂತರ ತಮ್ಮ ಸ್ವಗೃಹವಾದ ಪುತ್ತೂರು ತಾಲೂಕಿನ ಸರ್ವೇ ಗ್ರಾಮದ ಸೊರಕೆಯಲ್ಲಿ ನೆಡೆಯುವುದು ಎಂದು ತಿಳಿಸಲಾಗಿದೆ.

Baravanige News

Translate »

You cannot copy content from Baravanige News

Scroll to Top