ಉಡುಪಿ, ಜು.11: ಪರ್ಕಳದಿಂದ ಮಣಿಪಾಲ ಕಡೆಗೆ ಬರುತ್ತಿದ್ದ ಕಾರೊಂದು ಅಡ್ಡಾದಿಡ್ಡಿ ಚಲಿಸಿ ಇತರ ವಾಹನಗಳಿಗೆ ಢಿಕ್ಕಿ ಹೊಡೆದಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ.
ಕಾರೊಂದು ಕೆಎಂಸಿ ಆಸ್ಪತ್ರೆ ನಿಲ್ದಾಣ ಸಮೀಪ ಬಸ್‌ಗೆ ಹಿಂದಿನಿಂದ ಢಿಕ್ಕಿ ಹೊಡೆದಿದ್ದು, ಆ ಬಳಿಕ ಹಿಂದಕ್ಕೆ ರಿವರ್ಸ್ ತೆಗೆಯುವಾಗ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಗೆ ಗಾಯವಾಗಿದೆ.
ಇನ್ನು ಪರ್ಕಳದಿಂದ ಬರುವಾಗಲೆ ಅಡ್ಡಾದಿಡ್ಡಿ ಸಂಚರಿಸಿದ್ದ ಕಾರು ಕೆಲವು ವಾಹನಗಳಿಗೆ ಢಿಕ್ಕಿ ಹೊಡೆಸಿ ಹಾನಿಗೊಳಿಸಿದ್ದು, ಮಣಿಪಾಲದಲ್ಲಿ ಯುಟರ್ನ್ ಮಾಡಿಕೊಂಡು ಪರ್ಕಳ ಕಡೆಗೆ ಪರಾರಿಯಾಗುತ್ತಿದ್ದವರನ್ನು ಪೊಲೀಸರು ಬೆನ್ನಟ್ಟಿದ್ದಾರೆ.
ಪರ್ಕಳ ಸಮೀಪ ಕಾರು ನಿಲ್ಲಿಸಿದ ಮೂವರು ಅಪರಿಚಿತರು ಸಮೀಪದ ಕಾಡಿನೊಳಗೆ ನುಗ್ಗಿ ಪರಾರಿಯಾಗಿದ್ದಾರೆ. ಸ್ಥಳೀಯರು, ಪೊಲೀಸರು ಹುಡುಕಾಟ ನಡೆಸಿದರೂ ಪರಿಸರದಲ್ಲಿ ಯಾವುದೇ ಸುಳಿವು ಸಿಕ್ಕಿಲ್ಲ.