ನಾಪತ್ತೆಯಾಗಿದ್ದ ಬಿಜೆಪಿ ಕಾರ್ಯಕರ್ತನ ಮೃತದೇಹದಲ್ಲಿ ನೇತ್ರಾವತಿ ಹೊಳೆಯಲ್ಲಿ ಪತ್ತೆ..!

ಉಳ್ಳಾಲ : ಕಾಸರಗೋಡಿನ ಕುಂಬಳೆಯಿಂದ ಸೋಮವಾರ ಸಂಜೆ ದಿಢೀರ್ ನಾಪತ್ತೆಯಾಗಿದ್ದ ಯುವಕನ ಮೃತದೇಹ ಉಳ್ಳಾಲ ತೊಕ್ಕೊಟ್ಟು ಬಳಿ ನೇತ್ರಾವತಿ ನದಿ ತೀರದಲ್ಲಿ ಪತ್ತೆಯಾಗಿದೆ.



ಕುಂಬಳೆ ಬಂಬ್ರಾಣ ಕಲ್ಕುಲ ನಿವಾಸಿ ಕಲ್ಲಿನ ಮೇಸ್ತ್ರಿ ಕೆಲಸ ಮಾಡುತ್ತಿರುವ ಲೋಕೇಶ್ – ಪ್ರಭಾವತಿ ದಂಪತಿಯ ಪುತ್ರ ರಾಜೇಶ್ (26) ಎಂಬವರ ಮೃತದೇಹ ನೇತ್ರಾವತಿ ನದಿ ತೀರದಲ್ಲಿ ಪತ್ತೆಯಾಗಿದೆ

.
ಮೃತ ರಾಜೇಶ್ ಮೇಸ್ತ್ರೀ ಕೆಲಸ ಮಾಡುತ್ತಿದ್ದು, ಸಾಮಾಜಿಕ ಕಾರ್ಯಗಳಲ್ಲಿ ತನ್ನನು ತಾನು ತೊಡಗಿಸಿಕೊಂಡಿದ್ದ.

ಯುವಶಕ್ತಿ ಸೇವಾ ಪಥದ ಮೂಲಕ ನೊಂದ ಹೃದಯಗಳಿಗೆ ನೆರವನ್ನು ನೀಡುವಲ್ಲಿ ಸಹಕಾರಿಯಾಗಿದ್ದರು.

ಊರಿನ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿ ದುಡಿಯುತ್ತಿದ್ದರು. ಬಂಬ್ರಾಣ ಸ್ವಾಗತ್ ಫ್ರೆಂಡ್ಸ್ ನ ಮಾಜಿ ಕಾರ್ಯದರ್ಶಿಯಾಗಿದ್ದರು.

ಅಲ್ಲದೆ ಬಿಜೆಪಿ ಯುವಮೋರ್ಚಾ ಕುಂಬಳೆ ಮಂಡಲ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಘಟನೆಯ ಹಿನ್ನೆಲೆ : ಇದೇ ಸೋಮವಾರ ಸಂಜೆ 5.45 ಕೆ ಮನೆಯಿಂದ ಬೈಕಿನಲ್ಲಿ ತೆರಳಿದವರು ಮರಳಿ ಮನೆಗೆ ಬಾರದನ್ನು ಕಂಡು ಮನೆಯವರು ಹಾಗೂ ಗೆಳೆಯರು ಮೊಬೈಲ್ ಗೆ ಸಂಪರ್ಕಿಸಿದಾಗ ಸ್ವಿಚ್ ಆಫ್ ಆಗಿತ್ತು.

ಕೂಡಲೇ ಮನೆಯವರು ಕುಂಬಳೆ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದು, ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿದರು.

ತೊಕ್ಕೊಟ್ಟು ನೇತ್ರಾವತಿ ನದಿ ತೀರವಾದ ಬೆಂಗರೆಯಲ್ಲಿ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರು ಪಾಂಡೇಶ್ವರ ಪೊಲೀಸರಿಗೆ ಮಾಹಿತಿ ನೀಡಿದರು.

ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ವೆನ್ಲಾಕ್ ಆಸ್ಪತ್ರೆಗೆ ಸಾಗಿಸಿದ್ದರು.

ಮೃತದೇಹದ ಪ್ಯಾಂಟ್ ಕಿಸೆಯಲ್ಲಿ ಲಭಿಸಿದ ಮೊಬೈಲ್ ಫೋನ್ ನ ಸಿಮ್ ನ್ನು ಬೇರೊಂದು ಮೊಬೈಲ್ ಗೆ ಇಟ್ಟಾಗ ರಾಜೇಶ್ ರ ಸಂಬಂಧಿಕರು ಕಾಲ್ ಕರೆ ಮಾಡಿದ್ದರು.

ಕೂಡಲೇ ಪೊಲೀಸರು ಸಂಬಂಧಿಕರಿಗೆ ವಿಷಯವನ್ನು ತಿಳಿಸಿದ್ದು ಮನೆ ಮಂದಿ ಆಸ್ಪತ್ರೆಗೆ ತೆರಳಿ, ಮೃತದೇಹದ ಗುರುತು ಪತ್ತೆ ಹಚ್ಚಿದರು.

ಮೃತರು ತಂದೆ, ತಾಯಿ ಏಕ ಸಹೋದರ ಶುಭಂ ಹಾಗೂ ಅಪಾರ ಬಂಧು – ಮಿತ್ರರನ್ನು ಅಗಲಿದ್ದಾರೆ.

You cannot copy content from Baravanige News

Scroll to Top