ಬೈಂದೂರು: ತಿಮಿಂಗಲದ ಅಂಬರ್ ಗ್ರಿಸ್ ಹೆಸರಿನಲ್ಲಿ ಸಾರ್ವಜನಿಕರನ್ನು ವಂಚಿಸಲು ಯತ್ನಿಸುತ್ತಿದ್ದ ಮೂವರ ಬಂಧನ..!!!

ಬೈಂದೂರು, ಜು.12: ಹಳದಿ ಬಣ್ಣದ ಮೇಣದಂತಹ ವಸ್ತುವನ್ನು ತಿಮಿಂಗಲದ ಅಂಬರ್‌ಗ್ರಿಸ್ ಎಂದು ಹೇಳಿ ಸಾರ್ವಜನಿಕರಿಗೆ ಮಾರಾಟ ಮಾಡಿ ಲಕ್ಷಾಂತರ ರೂ. ವಂಚಿಸಿದ ಘಟನೆ ಇಂದು ಸಂಜೆ ಬೈಂದೂರು ತಾಲೂಕು ಯಡ್ತರೆ ಗ್ರಾಮದ ಹೊಸ ಬಸ್ ನಿಲ್ದಾಣದಲ್ಲಿ ನಡೆದಿದೆ.

ನಿರಂಜನ್ ಎಸ್(26), ಮಿಲನ್‌ ಮೋನಿಶ್ ಶೆಟ್ಟಿ (27), ಪೃಥ್ವಿ ಡಾಮ್ನಿಕ್(31) ಆರೋಪಿಗಳು.

ಹಳದಿ ಬಣ್ಣದ ಮೇಣದಂತಹ ವಸ್ತುವನ್ನು ತಿಮಿಂಗಲದ ಅಂಬರ್‌ಗ್ರಿಸ್ ಎಂದು ಹೇಳಿ 10 ಲಕ್ಷ ರೂ. ಹಣಕ್ಕೆ ಸಾರ್ವಜನಿಕರಿಗೆ ಮಾರಾಟ ಮಾಡಿ ವಂಚಿಸಲು ಯತ್ನಿಸುತ್ತಿದ್ದ ವೇಳೆ ಸ್ಥಳಕ್ಕಾಗಮಿಸಿದ ಬೈಂದೂರು ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿಗಳ ಮೇಲೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 11/2023 ಕಲಂ 420 ಜೊತೆಗೆ 34 ಐಪಿಸಿ ಯಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಈ ರೀತಿ ಮೇಣದಂತಹ ವಸ್ತುವಿಗೆ ತಿಮಿಂಗಲದ ಅಂಬರ್‌ಗ್ರೆಸ್ ಎಂದು ಸುಳ್ಳು ಹೇಳಿ ಸಾರ್ವಜನಿಕರನ್ನು ನಂಬಿಸಿ ಮೋಸ ಮಾಡುವ ಜಾಲವು ಎಲ್ಲೆಡೆ ಸಕ್ರಿಯವಾಗಿದ್ದು, ಈ ಬಗ್ಗೆ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆಯೂ, ಈ ರೀತಿಯ ಯಾವುದೇ ಆಮಿಷಕ್ಕೆ ಒಳಗಾಗಬಾರದೆಂದು ಮತ್ತು ಈ ರೀತಿಯ ಯಾವುದೇ ಮಾಹಿತಿ ಇದ್ದಲ್ಲಿ ಪೊಲೀಸ್ ಠಾಣೆಗೆ ತಿಳಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top