ಬೆಂಗಳೂರು, ಜು.18: ಕೇರಳದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಉಮ್ಮನ್ ಚಾಂಡಿ (79) ಅವರು ಇಂದು ನಿಧನರಾಗಿದ್ದಾರೆ.
ಉಮ್ಮನ್ ಚಾಂಡಿ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಫೆಬ್ರುವರಿ 12ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೇ ಜುಲೈ 18) ಕೊನೆಯುಸಿರೆಳೆದಿದ್ದಾರೆ.
ಇನ್ನು ಉಮ್ಮನ ಚಾಂಡಿ ಸಾವನ್ನಪ್ಪಿರುವುದನ್ನು ಕೇರಳ ಕಾಂಗ್ರೆಸ್ ರಾಜ್ಯಾಧ್ಯಕ್ಷ ಕೆ. ನಟರಾಜ್ನ್ ಟ್ವಿಟ್ಟರ್ ಮೂಲಕ ಖಚಿತಪಡಿಸಿದ್ದಾರೆ.
ಉಮ್ಮನ್ ಚಾಂಡಿ ಅವರು 2004 ರಿಂದ 2006 ಹಾಗೂ 2011 ರಿಂದ 2016ರ ವರೆಗೆ ಕೇರಳದ ಮುಖ್ಯಮಂತ್ರಿಯಾಗಿದ್ದರು.