ಕಾರ್ಕಳ : ಮಾರ್ಕೆಟ್ ರೋಡ್‌ನ ಮಹಿಳಾ ಕೋ ಆಪರೇಟಿವ್ ಸೊಸೈಟಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರಮೀಳಾ ಎಂಬವರು ಇತ್ತೀಚೆಗೆ ದುಡಿಯುತ್ತಿದ್ದ ಬ್ಯಾಂಕ್ ನಲ್ಲಿ ಜು. 14ರ ಬೆಳಿಗ್ಗೆ ಆತ್ಮಹತ್ಯೆಗೈದಿದ್ದರು.
ಇವರ ಸಾವಿಗೆ ಸಂತೋಷ್ ಯಾನೆ ಹರಿತನಯ ದೇವಾಡಿಗ ಎಂಬವರು ನೀಡಿದ ಕುಮ್ಮಕ್ಕೇ ಕಾರಣ ಎಂದು ಆರೋಪ ವ್ಯಕ್ತಪಡಿಸಿ ಪ್ರಮೀಳಾ ಸಹೋದರ ದೂರು ನೀಡಿದ್ದರು.
ಕಾರ್ಕಳ ಮಾರ್ಕೆಟ್ ರೋಡ್ ನ ಮಹಿಳಾ ಕೋ ಆಪರೇಟಿವ್ ಸೊಸೈಟಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರಮೀಳಾ ಎಂಬಾಕೆಗೆ 3 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್ ಮೇಲ್ ಮಾಡುತ್ತಿದ್ದನು.
ಆತನ ಕಿರುಕುಳದಿಂದಾಗಿ ಮಾನಸಿಕವಾಗಿ ನೊಂದಿದ್ದ ಪ್ರವೀಳಾ ಆತ್ಮಹತ್ಯೆ ಮಾಡಿಕೊಂಡಿದ್ದಳು.
ಈ ಕುರಿತಂತೆ ಪ್ರಮೀಳಾ ಸಹೋದರ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಯುತ್ತಿತ್ತು.
ಶನಿವಾರದಿಂದ ನಾಪತ್ತೆಯಾಗಿದ್ದ ಸಂತೋಷ್ ಈದುವಿನ ಮಾಪಾಲು ಹಾಡಿಯೊಂದರಲ್ಲಿ ಸಂತೋಷ್ ಶವ ಆತ್ಮಹತ್ಯೆಗೈದ ರೀತಿಯಲ್ಲಿ ಪತ್ತೆಯಾಗಿದೆ.
ಶವ ಕೊಳೆತು ಹೋಗಿದ್ದು ಆತ್ಮಹತ್ಯೆಗೈದು ಎರಡು ದಿನ ಆಗಿರಬಹುದು ಎಂದು ಅಂದಾಜಿಸಲಾಗಿದೆ.
ಸಂತೋಷ್ ಯಾನೆ ಹರಿತನಯ ಪತ್ನಿ ಹಾಗೂ ಪುಟ್ಟ ಮಗುವನ್ನು ಅಗಲಿದ್ದಾನೆ.