ಕಾಪು: ಅಕ್ರಮ ದಾಸ್ತಾನು 2. 87 ಲಕ್ಷ ರೂ ಮೌಲ್ಯದ ಪಡಿತರ ಅಕ್ಕಿ ವಶ

ಪಡುಬಿದ್ರಿ : ಕಾಪು ತಾಲೂಕಿನ ನಡ್ಸಾರು ಗ್ರಾಮ ಕನ್ಹಂಗಾರ್ ಎಂಬಲ್ಲಿ ಸರ್ಕಾರದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿದ ಸ್ಥಳಕ್ಕೆ ಅಧಿಕಾರಿಗಳು ದಾಳಿ ಮಾಡಿ 2,87,606 ರೂ ಮೌಲ್ಯದ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಖಚಿತ ಮಾಹಿತಿ ಪಡೆದ ಕಾಪುವಿನ ಆಹಾರ ನಿರೀಕ್ಷಕರಾದ ಟಿ ಲೀಲಾನಂದ ಅವರು, ಕಾಪು ಪೊಲೀಸರ ಸಹಕಾರದೊಂದಿಗೆ ನಡ್ಪಾಲು ಗ್ರಾಮದ ಕನ್ಹಂಗಾರ್ ಎಂಬಲ್ಲಿನ ಮೊಹಮ್ಮದ್ ಶಫೀಕ್ ಎಂಬವರ ಮನೆಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದಾಗ ಮನೆಯ ಹೊರಾಂಗಣ ಮತ್ತು ಎದುರಿರುವ ಗೋದಾಮಿನಲ್ಲಿ 2,87,606 ರೂ ಮೌಲ್ಯದ 13,073 ಕೆ ಜಿ ಅನ್ನಭಾಗ್ಯ ಯೋಜನೆಯಡಿ ಸಾರ್ವಜನಿಕರಿಗೆ ವಿತರಿಸುವ ಅಕ್ಕಿ ಪತ್ತೆಯಾಗಿದೆ.
ಈ ವೇಳೆ ಪೊಲೀಸರು ಹಾಗೂ ಅಧಿಕಾರಿಗಳು ಪತ್ತೆಯಾದ ಅಕ್ಕಿ ಹಾಗೂ ಇತರೆ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You cannot copy content from Baravanige News

Scroll to Top