ಮಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ನಿನ್ನೆಯಿಂದ ಭಾರೀ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳು ಮುಳುಗಡೆಯಾಗಿದೆ.
ರಾಜ್ಯದ ಖ್ಯಾತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರದಾರ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ.
ಸುಬ್ರಹ್ಮಣ್ಯ, ಕೊಲ್ಲಮೊಗ್ರು, ಬಿಸಿಲೆ, ಅಡ್ಡಹೊಳೆ ಮೊದಲಾದ ಕಡೆಗಳಲ್ಲಿ ಭಾರಿ ಮಳೆಯಾಗಿದ್ದು, ಕುಮಾರಧಾರಾ ನದಿಯಲ್ಲಿ ನೀರಿನ ಮಟ್ಟ ಭಾರಿ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಘಟ್ಟ ಪ್ರದೇಶಗಳಲ್ಲಿ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಕುಕ್ಕೆ ಸುಬ್ರಹ್ಮಣ್ಯ ದ ಕುಮಾರಧಾರಾ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ಅಲ್ಲಿನ ಲಗೇಜ್ ಕೊಠಡಿ, ಶೌಚಾಲಯಗಳೆಲ್ಲ ಜಲಾವೃತವಾಗಿವೆ.
ಮಂಜೇಶ್ವರ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಗೆ ಪ್ರವಾಹದ ನೀರು ನುಗ್ಗಿದ್ದು, ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧ ಮಾಡಲಾಗಿದೆ. ಪರಿಸರದಲ್ಲಿ ಅನೇಕ ಕಡೆ ಕೃಷಿ ತೋಟಗಳಿಗೆ ನದಿ ನೀರು ನುಗ್ಗಿದೆ.