ಮಣಿಪಾಲ, ಜು.24: ಇವತ್ತಿನ ಕಾರ್ಯಕ್ರಮದಲ್ಲಿ ಸಾಲುಮರದ ತಿಮ್ಮಕ್ಕ ಅವರು ಭಾಗವಹಿಸಿ ಗೌರವ ಸ್ವೀಕರಿಸಿ ನಮಗೆ ಮಾರ್ಗದರ್ಶನ ನೀಡಿರುವುದು ಹೆಮ್ಮೆಯ ವಿಚಾರವಾಗಿದೆ. ಪ್ರತಿಯೊಬ್ಬ ನಾಗರಿಕನೂ ತನ್ನ ಮನೆಯ ಪರಿಸರದಲ್ಲಿ ಸಸ್ಯಗಳನ್ನು ನೆಡುವ ಮೂಲಕ ಪರಿಸರ ರಕ್ಷಣೆ ಮಾಡುವ ಕೆಲಸ ಮಾಡಬೇಕಾಗಿದೆ. ಮುಂದಿನ ದಿನಗಳಲ್ಲಿ ಇಂತಹ ಕಾರ್ಯಕ್ರಮಗಳು ನಿತ್ಯ ನಿರಂತರವಾಗಿ ನಡೆದರೆ ಪರಿಸರದ ಜಾಗೃತಿ ಸಾಧ್ಯವಾಗುತ್ತದೆ.
ನಾವೆಲ್ಲರೂ ಕನಿಷ್ಟ 10 ಗಿಡಗಳನ್ನು ನೆಡುವ ಮೂಲಕ ಸಾಲು ಮರದ ತಿಮ್ಮಕ್ಕ ಅವರಿಗೆ ಗೌರವ ಕೊಡುವ ಕೆಲಸ ಮಾಡಬೇಕು ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.
ಮಣಿಪಾಲದ ಶಿವಪ್ರೇರಣಾ ಚಾರಿಟೇಬಲ್ ಟ್ರಸ್ಟ್ ಸರಳೇಬೆಟ್ಟು, ಪರಿವಾರ್ ಚಾರಿಟೇಬಲ್ ಟ್ರಸ್ಟ್ ಉಡುಪಿ ಹಾಗೂ ಸ್ನೇಹ ಸಂಗಮ ಸರಳೇಬೆಟ್ಟು ಮಣಿಪಾಲ ಇವರ ಸಹಭಾಗಿತ್ವದಲ್ಲಿ ಹೂವು – ಹಣ್ಣುಗಳ ಗಿಡಗಳ ಉಚಿತ ವಿತರಣಾ ಮೇಳ ಸಸ್ಯೋತ್ಸವ -2023 ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಸಾವಿರಾರು ಗಿಡಗಳನ್ನು ಉಚಿತವಾಗಿ ವಿತರಿಸಿ ,ಪದ್ಮಶ್ರೀ ಸಾಲುಮರದ ತಿಮ್ಮಕ್ಕರನ್ನು ಗೌರವಿಸಲಾಯಿತು.