ಕರಾವಳಿಯಲ್ಲಿ ಮಳೆ ಹಾನಿ: ಜು.31 ರಂದು ಸಿಎಂ ದಕ್ಷಿಣ ಕನ್ನಡ, ಉಡುಪಿ ಪ್ರವಾಸ

ಬೆಂಗಳೂರು: ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಸೋಮವಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ‌ ಭೇಟಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.



ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಿಎಂ, ಜುಲೈ 31 ಕ್ಕೆ ವಿವಿಧ ಜಿಲ್ಲೆಗಳ ಪ್ರವಾಸ ಕೈಗೊಂಡು ಮಳೆ ಹಾನಿ ಬಗ್ಗೆ ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದಾರೆ.

ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳ ಜನರನ್ನು ಭೇಟಿಯಾಗಿ ಅವರ ಕಷ್ಟಗಳನ್ನು ಆಲಿಸಲಾಗುವುದು ಎಂದು ತಿಳಿಸಿರುವ ಸಿದ್ದರಾಮಯ್ಯ, ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಬಿತ್ತನೆ ಚುರುಕಾಗಿ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಶೇಕಡಾ 100 ರಷ್ಟು ಬಿತ್ತನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Scroll to Top