ಉಡುಪಿ: ಜಿಲ್ಲಾಸ್ಪತ್ರೆ ವೈದ್ಯಾಧಿಕಾರಿಗಳೊಂದಿಗೆ ಶಾಸಕ ಯಶ್ ಪಾಲ್ ಸುವರ್ಣ ಸಭೆ

ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಉಡುಪಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ವೈದ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿ ಜಿಲ್ಲಾಸ್ಪತ್ರೆಯ ಕಾರ್ಯ ಚಟುವಟಿಕೆ, ಸಮಸ್ಯೆ ಹಾಗೂ ಬೇಡಿಕೆಗಳ ಬಗ್ಗೆ ಸಮಾಲೋಚನೆ ನಡೆಸಿದರು.

ಡಯಾಲಿಸಿಸ್ ಘಟಕ ನಿರ್ವಹಣೆ, ಜಿಲ್ಲಾ ಆಸ್ಪತ್ರೆಯ ವೈದ್ಯರ ಹಾಗೂ ಸಿಬ್ಬಂದಿಗಳ ಕೊರತೆ, ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸಿಬ್ಬಂದಿಗಳ ವೇತನ ಬಿಡುಗಡೆ, ಜಿಲ್ಲಾ ಮೆಡಿಕಲ್ ಕಾಲೇಜು ಮಂಜೂರು ಪ್ರಸ್ತಾವನೆ, ಜಿಲ್ಲಾಸ್ಪತ್ರೆ ಕಟ್ಟಡ ಕಾಮಗಾರಿ ಪ್ರಗತಿ ಸಹಿತ ವಿವಿಧ ವಿಷಯಗಳ ಬಗ್ಗೆ ಮಾಹಿತಿ ಪಡೆದು ಈ ಬಗ್ಗೆ ಸೂಕ್ತ ವರದಿ ನೀಡುವಂತೆ ಜಿಲ್ಲಾ ಸರ್ಜನ್ ರವರಿಗೆ ಸೂಚನೆ ನೀಡಿದರು.

ಶೀಘ್ರದಲ್ಲಿಯೇ ರಾಜ್ಯ ಸರಕಾರದ ಆರೋಗ್ಯ ಸಚಿವರು ಹಾಗೂ ವೈದ್ಯಕೀಯ ಶಿಕ್ಷಣ ಸಚಿವರನ್ನು ಭೇಟಿಯಾಗಿ ಬೇಡಿಕೆಗಳ ಬಗ್ಗೆ ಮನವಿ ಮಾಡುವುದಾಗಿ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಸರ್ಜನ್ ಡಾ ಸುದೇಶ್ ಕುಮಾರ್, ವೈದ್ಯಾಧಿಕಾರಿಗಳಾದ ಡಾ ವೀಣಾ ಕುಮಾರಿ, ಡಾ ರಾಜಗೋಪಾಲ ಭಂಡಾರಿ, ಡಾ ನಿತ್ಯಾನಂದ ನಾಯಕ್, ಡಾ ವಾಸುದೇವ ಎಸ್. , ಡಾ ಸುಭಾಷ್, ಡಾ ದಯಾಮಣಿ, ಡಾ ನಿಕಿನ್ ಶೆಟ್ಟಿ, ಡಾ. ಪ್ರಕಾಶ್ ಕೆ. ಎಸ್., ಡಾ. ಸಂದೀಪ್, ಡಾ. ಸೂರ್ಯನಾರಾಯಣ, ಡಾ. ಕೃಪಾಲಿನಿ ಮೊದಲಾದವರು ಉಪಸ್ಥಿತರಿದ್ದರು.

Scroll to Top